ಕರ್ನಾಟಕ

karnataka

ETV Bharat / state

ಛತ್ರಪತಿ ಶಿವಾಜಿ ಬಗ್ಗೆ ಅವಹೇಳನಕಾರಿ ಪೋಸ್ಟ್​​: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ - muslim community protest

ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಜಾತಿ, ಧರ್ಮ, ರಾಜ್ಯ, ಭಾಷೆಗೆ ಸೀಮಿತವಾದ ವ್ಯಕ್ತಿಯಲ್ಲ. ಇಡೀ ದೇಶ ಗೌರವಿಸುವ ಮಹನೀಯರು. ಆದಕಾರಣ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ ಬೆಳಗಾವಿ ಡಿಸಿಯವರಿಗೆ ಮನವಿ ಸಲ್ಲಿಸಲಾಯ್ತು.

muslim community protest on shivaji issue
ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

By

Published : Aug 31, 2020, 11:42 PM IST

ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮಾಜದ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದರು.

ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ಡಿಸಿ ಕಚೇರಿಗೆ ಆಗಮಿಸಿದ ಮುಸ್ಲಿಂ ಸಮಾಜದ ಮುಖಂಡರು, ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಜಾತಿ, ಧರ್ಮ, ರಾಜ್ಯ, ಭಾಷೆಗೆ ಸೀಮಿತವಾದ ವ್ಯಕ್ತಿಯಲ್ಲ. ಇಡೀ ದೇಶ ಗೌರವಿಸುವ ಮಹನೀಯರು. ಇಂತಹ ಮಹಾನ್ ವ್ಯಕ್ತಿಯ ಕುರಿತು ಫೇಸ್‍ಬುಕ್‍ನಲ್ಲಿ ಕೆಲ ಕಿಡಿಗೇಡಿಗಳು ಅಪಮಾನ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ. ಹೀಗಾಗಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details