ಕರ್ನಾಟಕ

karnataka

ETV Bharat / state

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ತಮ್ಮ ಪುತ್ರಿ ಪ್ರಿಯಾಂಕಾ ಸ್ಪರ್ಧಿಸಲ್ಲ: ಸತೀಶ್ ಜಾರಕಿಹೊಳಿ - ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಪ್ರಿಯಾಂಕಾ ಜಾರಕಿಹೊಳಿ

ಕಿತ್ತೂರು ತಾಲೂಕಿನಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಅನೇಕ ಮತಕ್ಷೇತ್ರಗಳಲ್ಲಿ ಈ ಸಮಸ್ಯೆ ಇದೆ. ಇದು ವರಿಷ್ಠರ ಗಮನಕ್ಕೂ ಬಂದಿದೆ. ಈ ಬಗ್ಗೆ ವರಿಷ್ಠರು ಚರ್ಚಿಸಿ ಕ್ರಮಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿದ್ದಾರೆ..

Priyanka jarakiholi
ಪ್ರಿಯಾಂಕಾ ಜಾರಕಿಹೊಳಿ

By

Published : Feb 14, 2021, 7:04 PM IST

ಬೆಳಗಾವಿ :ಬೆಳಗಾವಿ ಲೋಕಸಭಾ ಉಪಚುನಾವಣೆಗೆ ತಮ್ಮ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧಿಸುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಜಿಲ್ಲೆಯ ಚೆನ್ನಮ್ಮನ ಕಿತ್ತೂರು ಸಮೀಪದ ಅಂಬಡಗಟ್ಟಿ ಗ್ರಾಮದಲ್ಲಿಂದು ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಗಳಿಗೆ ಇನ್ನೂ ರಾಜಕೀಯ ಅನುಭವದ ಕೊರತೆ ಇದೆ.

ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಾರೆಂಬುದು ಕೇವಲ ಊಹಾಪೋಹವಷ್ಟೇ.. ಪ್ರಿಯಾಂಕಾ ಈಗಾಗಲೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸತೀಶ್ ಸ್ಪಷ್ಟಪಡಿಸಿದರು.

ಕಿತ್ತೂರು ತಾಲೂಕಿನಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಅನೇಕ ಮತಕ್ಷೇತ್ರಗಳಲ್ಲಿ ಈ ಸಮಸ್ಯೆ ಇದೆ. ಇದು ವರಿಷ್ಠರ ಗಮನಕ್ಕೂ ಬಂದಿದೆ. ಈ ಬಗ್ಗೆ ವರಿಷ್ಠರು ಚರ್ಚಿಸಿ ಕ್ರಮಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿದ್ದಾರೆ.

ಹೆಚ್ಚಿನ ಪಂಚಾಯತ್‌ಗಳಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಕಮಿಟಿಯೂ ರಚನೆಯಾಗಿವೆ. ನೂತನ ಸದಸ್ಯರು ಸರ್ಕಾರದ ಸೌಲಭ್ಯಗಳನ್ನು ಗ್ರಾಮಸ್ಥರಿಗೆ ಸಮರ್ಪಕವಾಗಿ ತಲುಪಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

ABOUT THE AUTHOR

...view details