ಚಿಕ್ಕೋಡಿ(ಬೆಳಗಾವಿ): ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಈ ಬಾರಿಯೂ ಪ್ರವಾಹ ಬರುವ ಮುನ್ಸೂಚನೆ ನೀಡಿದ್ದು, ಇದರಿಂದ ಎಚ್ಚೆತ್ತ ಬೆಳಗಾವಿ ಜಿಲ್ಲಾಡಳಿತ ಕೃಷ್ಣಾ ನದಿ ತೀರದಲ್ಲಿ ಎನ್‌ಡಿಆರ್‌ಎಫ್ ತಂಡವನ್ನು ನಿಯೋಜನೆ ಮಾಡಿದೆ.
ಪ್ರವಾಹ ಭೀತಿ: ಕೃಷ್ಣಾ ನದಿ ತೀರದಲ್ಲಿ ಎನ್‌ಡಿಆರ್‌ಎಫ್ ತಂಡ ನಿಯೋಜನೆ - chikkodi taluk Krishna river
ಪ್ರವಾಹ ಭೀತಿ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿ ತೀರದಲ್ಲಿ 25 ಸಿಬ್ಬಂದಿಯ ಎನ್‌ಡಿಆರ್‌ಎಫ್ ತಂಡವನ್ನು ನಿಯೋಜನೆ ಮಾಡಲಾಗಿದೆ.
ಪ್ರವಾಹ ಭೀತಿ: ಕೃಷ್ಣಾ ನದಿ ತೀರದಲ್ಲಿ ಪರಿಶೀಲನೆ ನಡೆಸುತ್ತಿರುವ ಎನ್‌ಡಿಆರ್‌ಎಫ್ ತಂಡ
ಈಗಾಗಲೇ 25 ಸಿಬ್ಬಂದಿ ಇರುವ ಎನ್‌ಡಿಆರ್‌ಎಫ್ ತಂಡ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ನಿಯೋಜನೆಗೊಂಡಿದ್ದು, ಪ್ರವಾಹವನ್ನ ಹೇಗೆ ಎದುರಿಸಬೇಕು ಎನ್ನುವ ಕುರಿತು ಸ್ಥಳೀಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದೆ.
ಮುಂದಿನ ದಿನಗಳಲ್ಲಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೃಷ್ಣಾ ನದಿ ತೀರದಲ್ಲಿ ಎನ್‌ಡಿಆರ್‌ಎಫ್ ತಂಡ ನಿಯೋಜನೆ ಮಾಡಲಾಗಿದೆ.