ಬೆಳಗಾವಿ: ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲು ಬದ್ಧನಾಗಿದ್ದೇನೆ ಎಂದು ಗೋಕಾಕ್ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಯಾವುದೇ ಕಾರಣಕ್ಕೂ ನಾಮಪತ್ರ ವಾಪಾಸ್ ಪಡೆಯಲ್ಲ: ಗೋಕಾಕ್ ಜೆಡಿಎಸ್ ಅಭ್ಯರ್ಥಿ ಸ್ಪಷ್ಟನೆ - Never take nomination back Gokak JDS Candidate AshOk Poojari Statement
ಬಿಜೆಪಿ ಸ್ಥಳೀಯ ನಾಯಕರು ನಾಮಪತ್ರ ಹಿಂಪಡೆಯುವಂತೆ ಮನವೊಲಿಕೆಗೆ ಬಂದಿದ್ದರು. ಆದರೆ ನಾನು ಬದ್ಧತೆ ಇರುವ ರಾಜಕಾರಣಿ. ಯಾವುದೇ ಕಾರಣಕ್ಕೆ ಚುನಾವಣೆ ಕಣದಿಂದ ಹಿಂದೆ ಸರಿಯಲ್ಲ ಎಂದು ಗೋಕಾಕ್ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಗೋಕಾಕ್ ನಗರದಲ್ಲಿ ಮಾತನಾಡಿ, ಬಿಜೆಪಿ ಸ್ಥಳೀಯ ನಾಯಕರು ನಾಮಪತ್ರ ಹಿಂಪಡೆಯುವಂತೆ ಮನವೊಲಿಕೆಗೆ ಬಂದಿದ್ದರು. ಆದರೆ ನಾನು ಬದ್ಧತೆ ಇರುವ ರಾಜಕಾರಣಿ. ಯಾವುದೇ ಕಾರಣಕ್ಕೆ ಚುನಾವಣೆ ಕಣದಿಂದ ಹಿಂದೆ ಸರಿಯಲ್ಲ. ಹೆಚ್.ಡಿ. ಕುಮಾರಸ್ವಾಮಿ ಸಭೆ ಕರೆದಿದ್ದು, ಬೆಂಗಳೂರಿಗೆ ತೆರಳುತ್ತಿದ್ದೇನೆ. ಚುನಾವಣಾ ಸಿದ್ಧತೆ, ಪ್ರಚಾರ ಬಗ್ಗೆ ಮಾತುಕತೆಗೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಜೆಡಿಎಸ್ ಪಕ್ಷದ ಎಲ್ಲಾ ನಾಯಕರಿಂದಲೂ ಗೋಕಾಕ್ನಲ್ಲಿ ಪ್ರಚಾರ ನಡೆಸಲಿದ್ದಾರೆ. ಶನಿವಾರದಿಂದ ಗೋಕಾಕ್ ಕ್ಷೇತ್ರದ ಚುನಾವಣಾ ಪ್ರಚಾರ ಆರಂಭಿಸುತ್ತೇನೆ ಎಂದರು.
ನಾನು ಯಡಿಯೂರಪ್ಪನವರಿಗೆ ಯಾವುದೇ ಮೋಸ ಮಾಡಿಲ್ಲ. ಶಾಸಕನಾಗಿ ಆಯ್ಕೆಯಾಗಿ ರಾಜೀನಾಮೆ ನೀಡಿದ್ದರೆ ಮೋಸ ಆಗುತ್ತಿತ್ತು. ಪಕ್ಷ ದ್ರೋಹ ಆರೋಪ ನನಗೆ ಅನ್ವಯಿಸುವುದಿಲ್ಲ ಎಂದು ಹೇಳಿದರು