ಕರ್ನಾಟಕ

karnataka

ETV Bharat / state

ಇಂದು ಬೆಳಗಾವಿಗೆ ನೂತನ ಸಚಿವ ; ಸ್ವಾಗತಕ್ಕೆ ಹಾರ-ತುರಾಯಿ ಬೇಡವೆಂದ ಸವದಿ - ಇಂದು ಬೆಳಗಾವಿಗೆ ನೂತನ ಸಚಿವ

ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ನೂತನ ಸಚಿವ ಲಕ್ಷ್ಮಣ ಸವದಿ ತಮ್ಮ ಸ್ವಾಗತಕ್ಕೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಾರ-ತುರಾಯಿ ತರಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಲಕ್ಷ್ಮಣ ಸವದಿ

By

Published : Aug 21, 2019, 1:55 AM IST

ಬೆಳಗಾವಿ :ನೂತನ ಸಚಿವ ಲಕ್ಷ್ಮಣ ಸವದಿ ಇಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ಬೆಳಗ್ಗೆ 11.30 ಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರವಾಹಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.

ಸಚಿವರಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಆಗಮಿಸುತ್ತಿರುವುದರಿಂದ ತಮ್ಮ ಸ್ವಾಗತಕ್ಕೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಾರ-ತುರಾಯಿ ತರಬಾರದು ಎಂದು ಸಚಿವ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಥವಾ ಅಹವಾಲುಗಳನ್ನು ತಿಳಿಸಿದರೆ ಸಾಕು. ಜಿಲ್ಲೆಯ ಜನರು ಪ್ರವಾಹದಿಂದ ಬಾಧಿತಗೊಂಡಿರುವ ಈ ಸಂದರ್ಭದಲ್ಲಿ ತಮ್ಮ ಸ್ವಾಗತಕ್ಕೆ ಯಾರೂ ಕೂಡ ಹಾರ-ತುರಾಯಿ ತರುವುದು ಬೇಡ ಎಂದು ಅವರು ತಿಳಿಸಿದ್ದಾರೆ.

ಪ್ರವಾಹ ಪರಿಸ್ಥಿತಿ, ಪುನರ್ವಸತಿ ಮತ್ತಿತರ ವಿಷಯಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಗುರುವಾರದಿಂದ ಗೋಕಾಕ, ಕಿತ್ತೂರು ತಾಲೂಕುಗಳು ಸೇರಿದಂತೆ ಪ್ರವಾಹ ಬಾಧಿತ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಅಹವಾಲು ಆಲಿಸುತ್ತೇನೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ABOUT THE AUTHOR

...view details