ಬೆಳಗಾವಿ: ಬಿಜೆಪಿ ಪಕ್ಷದಲ್ಲಿ ದೊಡ್ಡ ಪ್ರಮಾಣದಲ್ಲಿ ಭಿನ್ನಮತವಿಲ್ಲ, ಸಣ್ಣ ಪುಟ್ಟ ವ್ಯತ್ಯಾಸಗಳಿವೆ, ಅವುಗಳನ್ನು ಸರಿಪಡಿಸಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ನಗರದಲ್ಲಿ ನಡೆದ ಜನಸೇವಕ ಸಮಾವೇಶ ಸಮಾರೋಪ ಸಮಾರಂಭದ ನಂತರ ಮಾತನಾಡಿ, ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ದೇಶದ ಗೃಹಸಚಿವರು ಕೂಡ ಅತ್ಯಂತ ಖಷಿಯಾಗಿ ದೆಹಲಿಗೆ ತೆರಳಿದ್ದಾರೆ ಎಂದರು.
ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ ಓದಿ:ಸಿಎಂ ಯಡಿಯೂರಪ್ಪನವರಿಗೆ ಅಮಿತ್ ಶಾ ಖಾರವಾಗಿ ಮಾತನಾಡಿಲ್ಲ: ಡಿಸಿಎಂ ಕಾರಜೋಳ
ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಸಂಬಂಧಿಸಿದ ಮುಂದಿನ ಎಲ್ಲ ಚುನಾವಣೆಗಳಲ್ಲಿ ತೊಡಗಿಸಿಕೊಳ್ಳಲು ಕಾರ್ಯಕರ್ತರಿಗೆ ಹುರುಪು ತುಂಬುವ ಕೆಲಸವನ್ನು ಅಮಿತ್ ಶಾ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಪ್ರವಾಸ ಕೈಗೊಳ್ಳಲಾಗುವುದು. ಸಚಿವ ಸಂಪುಟ ವಿಸ್ತರಣೆ ಆದಾಗ ಕೆಲ ಸಣ್ಣಪುಟ್ಟ ವ್ಯತ್ಯಾಸಗಳು, ಅಸಮಾಧಾನಗಳು ಆಗುವುದು ಸಹಜ. ಎಲ್ಲವನ್ನೂ ಸರಿಪಡಿಸಿಕೊಂಡು ಹೋಗಲಾಗುವುದು ಎಂದರು.