ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗುತ್ತಿದ್ದಂತೆ ಜಿಲ್ಲೆಯಲ್ಲಿ ಮಂತ್ರಿಸ್ಥಾನಕ್ಕಾಗಿ ಲಾಬಿಗಳು ತೀವ್ರಗೊಂಡಿವೆ.
ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ನಾನು ಮಂತ್ರಿಸ್ಥಾನದ ಪ್ರಬಲ ಆಕಾಂಕ್ಷಿ. ಮೂರು ಬಾರಿ ಶಾಸಕನಾಗಿ ಸರ್ಕಾರದ ಯೋಜನೆಯನ್ನು ಜನರ ಬಾಗಿಲಿಗೆ ಮುಟ್ಟಿಸುವ ಕೆಲಸ ಮಾಡಿದ್ದೇನೆ. ಈವರೆಗೆ ಡೆಪ್ಯುಟಿ ಸ್ಪೀಕರ್ ಆಗಿ ಸೇವೆ ಸಲ್ಲಿಸಲು ಅವಕಾಶ ಕೊಟ್ಟ ರಾಷ್ಟ್ರೀಯ, ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುವೆ. ನಾಳೆ ನಡೆಯುವ ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೂ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದೇನೆ.