ಚಿಕ್ಕೋಡಿ: ಕೋವಿಡ್ ತಡೆಗೆ ರಾಜ್ಯದ ಗಡಿ ಭಾಗಗಳಲ್ಲಿ ಭಾರೀ ನಿಗಾ ವಹಿಸಲಾಗ್ತಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲೂ ಹೈ ಅಲರ್ಟ್ ಇದ್ದು, ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ RTPCR ನೆಗೆಟಿವ್ ರಿಪೋರ್ಟ್ ಇಲ್ಲದೇ ಪ್ರಯಾಣಿಕರನ್ನು ಕರೆತಂದಿದ್ದ ಖಾಸಗಿ ಬಸ್ಗಳನ್ನು ವಾಪಸ್ ಕಳುಹಿಸಲಾಗಿದೆ.
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್: RTPCR ನೆಗೆಟಿವ್ ವರದಿ ಇಲ್ಲದೇ ಬಂದ್ರೆ ವಾಪಸ್ - RTPCR,
ನಿಪ್ಪಾಣಿ ಬಳಿ ಇರುವ ಕೋಗನೋಳಿ ಚೆಕ್ ಪೋಸ್ಟ್ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದದೆ. ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಬರುವ ವಾಹನಗಳ ತಪಾಸಣೆ ನಡೆಸಲಾಗ್ತಿದೆ. RTPCR ನೆಗೆಟಿವ್ ವರದಿ ಇಲ್ಲದ ಪ್ರಯಾಣಿಕರನ್ನು ಕರೆತಂದಿದ್ದ ಖಾಸಗಿ ಬಸ್ಗಳನ್ನು ಹಿಂದಕ್ಕೆ ಕಳುಹಿಸಲಾಗಿದೆ.
![ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್: RTPCR ನೆಗೆಟಿವ್ ವರದಿ ಇಲ್ಲದೇ ಬಂದ್ರೆ ವಾಪಸ್ High Alert in Karnataka-Maharashtra border](https://etvbharatimages.akamaized.net/etvbharat/prod-images/768-512-12452273-thumbnail-3x2-xcfgbh.jpg)
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿ ಇರುವ ಕೋಗನೋಳಿ ಚೆಕ್ ಪೋಸ್ಟ್ನಲ್ಲಿ ನಿಗಾ ವಹಿಸಲಾಗಿದೆ. ಡೆಲ್ಟಾ ವೈರಸ್ ಹಾಗೂ ಮೂರನೇ ಅಲೆ ಆತಂಕದ ಹಿನ್ನೆಲೆ ವಾಹನಗಳನ್ನು ಕಟ್ಟುನಿಟ್ಟಿನ ತಪಾಸಣೆ ಮಾಡಲಾಗ್ತಿದೆ.
ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಬರುವ ಎಲ್ಲ ವಾಹನಗಳ ತಪಾಸಣೆ ನಡೆಸಲಾಗ್ತಿದ್ದು, ಆರ್‌ಟಿಪಿಸಿಆರ್ ರಿಪೋರ್ಟ್ ಹೊಂದುವುದು ಖಡ್ಡಾಯವಾಗಿದೆ.
Last Updated : Jul 14, 2021, 9:50 AM IST