ಕರ್ನಾಟಕ

karnataka

ETV Bharat / state

ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಸಾಧ್ಯವಿಲ್ಲ : ಸತೀಶ್​ ಜಾರಕಿಹೊಳಿ

ಸಿಎಂ ಬೊಮ್ಮಾಯಿಯವರ ಸಂಪುಟದಲ್ಲಿ 20 ಜನ ಹಳೆ ಮಂತ್ರಿಗಳಿದ್ದಾರೆ. ಉಳಿದಂತೆ 9 ಜನ ಹೊಸ ಸಚಿವರು ಸಂಪುಟ ಸೇರಿದ್ದಾರೆ. ಅವರಿಂದ ಯಾವುದೇ ನೀರಿಕ್ಷೆ ಮಾಡಲು ಸಾಧ್ಯವಿಲ್ಲ. ಬೊಮ್ಮಾಯಿ ಸಂಪುಟದಲ್ಲಿರುವ ಮೂವರು ಸಚಿವರ ವಿರುದ್ಧ ಗಂಭೀರ ಆರೋಪಗಳಿವೆ. ಮುಂದಿನ ದಿನಗಳಿಲ್ಲ ಈ ಸಚಿವರ ವಿರುದ್ಧ ಹೋರಾಟ ನಡೆಸಲು ಪಕ್ಷದಿಂದ ಚರ್ಚಿಸಲಾಗುವುದು..

Satish Jarakiholi
ಸತೀಶ್​ ಜಾರಕಿಹೊಳಿ

By

Published : Aug 6, 2021, 7:31 PM IST

ಬೆಳಗಾವಿ :ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಹೇಳಿದರು.

ಬೊಮ್ಮಾಯಿ ಸಚಿವ ಸಂಪುಟದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಪ್ರತಿಕ್ರಿಯೆ..

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರೇ, ಈಗ ಸಿಎಂ ಬೊಮ್ಮಾಯಿ ಸಂಪುಟದಲ್ಲೂ ಸಚಿವರಾಗಿದ್ದಾರೆ. ಅವರ ಕಾರ್ಯವೈಖರಿಯನ್ನು ಈಗಾಗಲೇ ನಾವು ನೋಡಿದ್ದೇವೆ. ಹೀಗಾಗಿ, ಈಗ ಅಧಿಕಾರ ಸ್ವೀಕರಿಸಿರುವ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದರು.

ಈ ಹಿಂದೆ ಮಂತ್ರಿಗಳಿದ್ದವರೂ ಜಿಲ್ಲೆಯ ಯಾವುದೇ ಸಮಸ್ಯೆಗೆ ಸ್ಪಂದಿಸಿರಲಿಲ್ಲ. ಕೊರೊನಾ ಹಾಗೂ ಪ್ರವಾಹಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆಗಳನ್ನು ಮಾಡಿರಲಿಲ್ಲ. ಈಗ ಮತ್ತೆ ಅವರೇ ಸಚಿವರಾಗಿದ್ದಾರೆ. ಅದೇ ಪರಿಸ್ಥಿತಿ ಮುಂದುವರೆಯುತ್ತದೆ ಅಷ್ಟೇ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬೊಮ್ಮಾಯಿ ಸಂಪುಟದಲ್ಲಿರುವ ಮೂವರು ಸಚಿವರ ವಿರುದ್ಧ ಗಂಭೀರ ಆರೋಪಗಳಿವೆ. ಮುಂದಿನ ದಿನಗಳಿಲ್ಲ ಈ ಸಚಿವರ ವಿರುದ್ಧ ಹೋರಾಟ ನಡೆಸಲು ಪಕ್ಷದಿಂದ ಚರ್ಚಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.

ಮೂರನೇ ಅಲೆ ಬಗ್ಗೆ ಸರ್ಕಾರ ಸ್ಪಷ್ಟ ಮಾಹಿತಿ ನೀಡಲಿ :ಸರ್ಕಾರ ಕೊರೊನಾ ಬಗ್ಗೆ ಮೊದಲಿನಿಂದಲೂ ನಿರ್ಲಕ್ಷ್ಯ ತಾಳುತ್ತಲೇ ಬಂದಿದೆ. ಈಗ ಮೂರನೇ ಅಲೆ ಹರಡುವ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಈ ಬಗ್ಗೆ ಯಾರ ಬಳಿಯೂ ಸ್ಪಷ್ಟ ಮಾಹಿತಿ ಇಲ್ಲ. ಹೀಗಾಗಿ, ಸರ್ಕಾರ ಮೂರನೇ ಅಲೆ ಬಗ್ಗೆ ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಕೇಂದ್ರದಿಂದ ಅನುದಾನ ಬರಲ್ಲ :ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರೋವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನ ಬರುವುದಿಲ್ಲ. ಪ್ರಧಾನಿ ಮೋದಿಯವರು ರಾಜ್ಯಕ್ಕೆ ಸಾಕಷ್ಟು ಸಮಸ್ಯೆ ಮಾಡಿದ್ದಾರೆ. ರಾಜ್ಯ ಸರ್ಕಾರ ಪ್ರತಿ ಬಾರಿ ಪ್ರವಾಹ ಸಂತ್ರಸ್ತರಿಗೆ ಪರಿಹಾರವನ್ನು ಘೋಷಿಸುತ್ತಿದೆ. ಆದರೆ, ಆ ಪರಿಹಾರ ಸಂತ್ರಸ್ತರಿಗೆ ತಲುಪುತ್ತಿಲ್ಲ. ಈ ಬಾರಿ ಪ್ರವಾಹ ಎದುರಾಗಿದ್ದರೂ ಕೂಡ ಯಾವುದೇ ಪರಿಹಾರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಓದಿ: ಮಹಾರಾಷ್ಟ್ರ ಜತೆ ನೀರು ಹಂಚಿಕೆ ಸಮನ್ವಯತೆಗೆ ಮೊದಲ ಆದ್ಯತೆ: ಸಿಎಂ ಬೊಮ್ಮಾಯಿ

ABOUT THE AUTHOR

...view details