ಕರ್ನಾಟಕ

karnataka

ETV Bharat / state

ವಿಧಾನಸಭೆಯಲ್ಲಿ ವೀರ ಸಾವರ್ಕರ್ ಫೋಟೋ ಅಳವಡಿಕೆ ನಿರೀಕ್ಷೆ ಇರಲಿಲ್ಲ: ಸತೀಶ್ ಜಾರಕಿಹೊಳಿ - ಕಾಂಗ್ರೆಸ್ ಅಭ್ಯರ್ಥಿಗಳ ಲಿಸ್ಟ್

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಎಐಸಿಸಿ ವಿವಿಧ ಮಾನದಂಡಗಳಲ್ಲಿ ಅಭ್ಯರ್ಥಿಗಳನ್ನು ಪರಿಶೀಲಿಸಿ ಫೈನಲ್ ಮಾಡಲಿದೆ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಭಿಮತ.

Satish Jarkiholi spoke to media
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸತೀಶ್ ಜಾರಕಿಹೊಳಿ

By

Published : Dec 18, 2022, 7:19 PM IST

ಬೆಳಗಾವಿ:ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ ನಿರೀಕ್ಷೆ ಇರಲಿಲ್ಲ. ಅದರ ಬಗ್ಗೆ ಕಾಂಗ್ರೆಸ್ ಪಕ್ಷ ಚರ್ಚೆ ಮಾಡಲಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆಯ ವಿಚಾರವಾಗಿ, ಏನು ಮಾಡಬೇಕು ಎಂಬುದರ ಕುರಿತು ಕಾಂಗ್ರೆಸ್ ಪಕ್ಷ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ವೈಯಕ್ತಿಕ ವಿಚಾರವನ್ನು ನಾನು ಮಾತನಾಡುವುದಿಲ್ಲ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಎಐಸಿಸಿ ವಿವಿಧ ಮಾನದಂಡಗಳಲ್ಲಿ ಅಭ್ಯರ್ಥಿಗಳನ್ನು ಪರಿಶೀಲಿಸಿ, ಫೈನಲ್ ಮಾಡಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಲಿಸ್ಟ್ ಹೊರಬರುವುದಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇದೆ ಎಂದು ಪ್ರತಿಕ್ರಿಯೆ ನೀಡಿದರು.

ಇದನ್ನೂಓದಿ:ಹಿಂದೂ 'ಅಶ್ಲೀಲ' ಪದ ಹೇಳಿಕೆ: ಸತೀಶ್​ ಜಾರಕಿಹೊಳಿ ವಿರುದ್ಧ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ಕಿಡಿ!

ABOUT THE AUTHOR

...view details