ಬೆಳಗಾವಿ: 2024ರ ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಎರಡು ರಾಜ್ಯವಾಗಿ ಇಬ್ಭಾಗವಾಗಲಿದೆ ಎಂದು ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಇದು ಅವರ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಸರ್ಕಾರವಾಗಲಿ, ಪಕ್ಷವಾಗಲಿ ಇಂಥ ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ದೀನ ದಲಿತರ, ಅಲ್ಪಸಂಖ್ಯಾತರ ಹೆಸರಿನಲ್ಲಿ ರಾಜಕೀಯ ಮಾಡಿದೆ. ಬಿಜೆಪಿ ಸಾಮಾಜಿಕ ಭದ್ರತೆಯ ಮೇಲೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪತಿ ಮುರ್ಮು ಅವರನ್ನು ಘೋಷಿಸಿದೆ. ಕಾಂಗ್ರೆಸ್ ದಲಿತರು, ಅಲ್ಪಸಂಖ್ಯಾತರಿಗೆ ದೊಡ್ಡ ಹುದ್ದೆ ನೀಡಿರಲಿಲ್ಲ. ಆದ್ರೀಗ ದ್ರೌಪದಿ ಮುರ್ಮು ಉನ್ನತ ಹುದ್ದೆ ಅಲಂಕರಿಸಲಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದಿಸುವೆ ಎಂದರು.