ಕರ್ನಾಟಕ

karnataka

ಬೆಂಗಳೂರಿನಲ್ಲಿಂದು ನೂತನ ಶಾಸಕರಿಗೆ ಪ್ರಮಾಣವಚನ ಕಾರ್ಯಕ್ರಮ

By

Published : Dec 22, 2019, 9:43 AM IST

ಉಪಚುನಾವಣೆಯಲ್ಲಿ ಜಯ ಸಾಧಿಸಿದ ಶಾಸಕರಿಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

bgm
ನೂತನ ಶಾಸಕರಿಗೆ ಪ್ರಮಾಣ ವಚನ ಕಾರ್ಯಕ್ರಮ

ಚಿಕ್ಕೋಡಿ:ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರಿಗೆ ಪ್ರಮಾಣವಚನ ಕಾರ್ಯಕ್ರಮ ಇಂದು ಬೆಂಗಳೂರಿನಲ್ಲಿ ನಡೆಯಲಿದೆ.

ಶಾಸಕ ಉಮೇಶ್ ಕತ್ತಿ

ಬೆಳಗಾವಿ ಜಿಲ್ಲೆಯ ಗೋಕಾಕ್​ ಮತಕ್ಷೇತ್ರದ ರಮೇಶ್​ ಜಾರಕಿಹೊಳಿ, ಅಥಣಿ ಕ್ಷೇತ್ರದ ಮಹೇಶ್​ ಕುಮಟಳ್ಳಿ, ಕಾಗವಾಡ ಕ್ಷೇತ್ರದ ಶ್ರೀಮಂತ ಪಾಟೀಲ್​ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ ಶಾಸಕರ ಪ್ರಮಾಣವಚನ ಸಮಾರಂಭ ನಡೆಯಲಿದೆ.

ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳ ಉಪಚುನಾವಣೆ ನಡೆದಿದ್ದು, ಈ ಮೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಮೂವರಿಗೆ ಸಚಿವ ಸ್ಥಾನದ ಜೊತೆಗೆ ಹುಕ್ಕೇರಿ ಶಾಸಕ ಉಮೇಶ ಕತ್ತಿಗೂ ಇಂದು ಸಚಿವ ಸ್ಥಾನ ನೀಡುವ ನಿರೀಕ್ಷೆ ಇದೆ ಎಂದು ಕತ್ತಿ ಅವರ ಆಪ್ತರು ಹೇಳುತ್ತಿದ್ದಾರೆ.

ಒಟ್ಟಾರೆಯಾಗಿ ಬೆಳಗಾವಿಯಲ್ಲಿ ಈಗಾಗಲೇ ಡಿಸಿಎಂ ಲಕ್ಷ್ಮಣ್​ ಸವದಿ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಸಚಿವರಾಗಿದ್ದು, ಇನ್ನು ನಾಲ್ಕು ಸಚಿವ ಸ್ಥಾನಗಳು ಸಿಗುವ ನಿರೀಕ್ಷೆ ಇದೆ. ಈ ನಾಲ್ಕು ಜನ ಶಾಸಕರಿಗೆ ಯಾವ ಖಾತೆಗಳು ಸಿಗುತ್ತವೆ ಎಂಬುದು ಕುತೂಹಲ ಮೂಡಿಸಿದೆ.

For All Latest Updates

TAGGED:

ABOUT THE AUTHOR

...view details