ಬೆಳಗಾವಿ:ಪ್ರತಿವೋರ್ವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಯಾವ ಭಾಗದಲ್ಲಿ ಮತ ಚಲಾವಣೆ ಹಕ್ಕು ಹೊಂದಿದ್ದೀರಿ ಎಂಬುದನ್ನು ತಿಳಿದುಕೊಳ್ಳಲು ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ ತಿಳಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆಗೆ ಅಂತಿಮ ದಿನಾಂಕ ಪ್ರಕಟಿಸಿದ ಬೆಳಗಾವಿ ಜಿಲ್ಲಾಧಿಕಾರಿ - ಮತದಾರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ಬೆಳಗಾವಿ
ಕೇಂದ್ರ ಚುನಾವಣಾ ಆಯೋಗ ಮತದಾರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ ತಿಳಿಸಿದರು.
![ಮತದಾರರ ಪಟ್ಟಿ ಪರಿಷ್ಕರಣೆಗೆ ಅಂತಿಮ ದಿನಾಂಕ ಪ್ರಕಟಿಸಿದ ಬೆಳಗಾವಿ ಜಿಲ್ಲಾಧಿಕಾರಿ](https://etvbharatimages.akamaized.net/etvbharat/prod-images/768-512-4735170-thumbnail-3x2-vid.jpg)
ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ ಅನೇಕ ಮತದಾರರು ತಮ್ಮ ಮತದಾರರ ಪಟ್ಟಿಯ ಹೆಸರಿನಲ್ಲಿ ಉಂಟಾದ ಅನೇಕ ತೊಂದರೆಗಳ ಬಗ್ಗೆ ಆಯೋಗದ ಗಮನಕ್ಕೆ ತಂದಿದ್ದಾರೆ. ಈಗಾಗಲೇ ಅನೇಕ ಮತದಾರರ ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದ್ದು, ಯಾರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು ಅಂದುಕೊಂಡಿದ್ದಾರೆಯೋ ಅಂತವರು ಇದೇ ತಿಂಗಳ 15 ರೊಳಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯ ಎಲ್ಲಾ ಅರ್ಹ ಮತದಾರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸರಿಯಾಗಿರುವ ಕುರಿತು ಪರಿಶೀಲಿಸಿ ಖಚಿತಪಡಿಸಿಕೊಳ್ಳಲು ಹಾಗೂ ಯಾವುದಾದರೂ ಲೋಪಗಳಿದ್ದರೆ ಅವುಗಳನ್ನು ಸರಿಪಡಿಸಲು ಮುಖ್ಯ ಚುನಾವಣಾ ಅಧಿಕಾರಿಗಳ ತಂತ್ರಾಂಶ ecokarnataka.kar.nic.in ಬಳಸಿ ಪರಿಶೀಲನೆ ಮಾಡಬಹುದು. ಜೊತೆಗೆ ವಿಶೇಷಚೇತನ ಮತದಾರರು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿ ಟೋಲ್ ಫ್ರೀ ನಂ 1950 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.