ಕರ್ನಾಟಕ

karnataka

ETV Bharat / state

ಬಾಕಿ ಹಣ ಪಾವತಿಸದ ಹಿನ್ನೆಲೆ... ಎಂಕೆ ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆ ಸೀಜ್ - undefined

ಜಿಲ್ಲೆಯ ಕಿತ್ತೂರು ತಾಲೂಕಿನ ಮಲಪ್ರಭಾ ಸಕ್ಕರೆ ಕಾರ್ಖಾನೆಯು ನಿಗದಿತ ಸಮಯದಲ್ಲಿ ಕಬ್ಬು ಬೆಳೆಗಾರರಿಗೆ ಬಾಕಿ ಹಣ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಸೀಜ್​ ಮಾಡಿ ಸುಮಾರು 22 ಕೋಟಿ ರೂ ಮೌಲ್ಯದ ಸಕ್ಕರೆಯನ್ನು ವಶಪಡಿಸಿಕೊಂಡಿದ್ದಾರೆ.

Belgaum​

By

Published : Jul 6, 2019, 3:32 AM IST

ಬೆಳಗಾವಿ:ರೈತರ ಕೋಟ್ಯಾಂತರ ರೂ. ಕಬ್ಬಿನ ಬಾಕಿ ಹಣ ನೀಡದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಎಂಕೆ ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯ ಎರಡು ಗೋದಾಮನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ಹುಬ್ಬಳ್ಳಿಯ ಎಂಕೆ ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸೀಜ್​ ಮಾಡಿದ ಅಧಿಕಾರಿಗಳು

ಜಿಲ್ಲೆಯ ಕಿತ್ತೂರು ತಾಲೂಕಿನ ಮಲಪ್ರಭಾ ಸಕ್ಕರೆ ಕಾರ್ಖಾನೆ ರೈತರಿಂದ ಕಬ್ಬು ಪಡೆದು ನಿಗದಿತ ಸಮಯದಲ್ಲಿ ಬೆಳೆಗಾರರಿಗೆ ಬಾಕಿ ಇರುವ ಹಣವನ್ನು ಇನ್ನೂ ಪಾವತಿಸಿಲ್ಲ. ಈ ಹಿನ್ನೆಯಲ್ಲಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿಯವರ ನಿರ್ದೇಶನದ ಮೇರೆಗೆ ಡಿಸಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಅಧಿಕಾರಿಗಳಿಗೆ ಕಾರ್ಖಾನೆಯನ್ನು ಸೀಜ್​ ಮಾಡುವಂತೆ ಸೂಚನೆ ನೀಡಿದ್ದರು.

ಈ ಆದೇಶದ ಮೇರೆಗೆ ಶುಕ್ರವಾರ ಕಿತ್ತೂರು ತಾಲೂಕಿನ ತಹಶೀಲ್ದಾರ್ ಪ್ರವೀಣ್ ಜೈನ್ ನೇತೃತ್ವದ ತಂಡ ಕಾರ್ಖಾನೆ ಮೇಲೆ ದಾಳಿ ನಡೆಸಿ ಸುಮಾರು 22 ಕೋಟಿ ರೂ ಮೌಲ್ಯದ ಸಕ್ಕರೆಯನ್ನು ಸೀಜ್​ ಮಾಡಿ ಕಾರ್ಖಾನೆಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಕಳೆದ ತಿಂಗಳೇ ಕಾರ್ಖಾನೆಯನ್ನು ಮುಟ್ಟುಗೋಲು ಹಾಕುವಂತೆ ಡಿಸಿ ಸೂಚನೆ ನೀಡಿದ್ದರು ಎನ್ನಲಾಗುತ್ತಿದೆ.

For All Latest Updates

TAGGED:

ABOUT THE AUTHOR

...view details