ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿದ ಅಧಿಕಾರಿಗಳ ಮೇಲೆ ದಂಧೆಕೋರರು ಕಲ್ಲು ತೂರಿದ್ದಾರೆ.
ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ - Officials raid on Illegal sand mining in Belagavi
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ದಂಧೆಕೋರರು ಕಲ್ಲು ತೂರಿದ್ದಾರೆ.
ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿದ ಅಧಿಕಾರಿಗಳ ಮೇಲೆ ಕಲ್ಲುತೂರಾಟ
ಗುರುವಾರ ಸಂಜೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡೆ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಅಧಿಕಾರಿಗಳ ಕಾರಿನ ಮೇಲೆ 20 ಜನರು ಕಲ್ಲು ತೂರಾಟ ನಡೆಸಿದ್ದಾರೆ.
ಇಲಾಖೆಗೆ ಸೇರಿದ ಒಂದು ಟಾಟಾ ಸುಮೋ ವಾಹನದ ಗಾಜುಗಳು ಪುಡಿಪುಡಿಯಾಗಿವೆ. ಡ್ರೈವರ್ ಸೇರಿ ಮೂರು ಜನ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗವೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.