ಚಿಕ್ಕೋಡಿ: ಶಾಶ್ವತ ನೀರಿಗಾಗಿ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಒಂಭತ್ತನೆಯ ದಿನವೂ ಮುಂದುವರಿದಿದೆ. ಕೃಷ್ಣಾ ನದಿ ನೀರು ಹೋರಾಟ ಸಮಿತಿಯಿಂದ ನಡೆಯುತ್ತಿರುವ ಪ್ರತಿಭಟನೆಗೆ ಇದುವರೆಗೂ ಸರ್ಕಾರದಿಂದ ಯಾವ ಭರವಸೆ ಸಹ ಸಿಕ್ಕಿಲ್ಲ ಎನ್ನಲಾಗ್ತಿದೆ.
ಕೃಷ್ಣಾ ನದಿಗೆ ನೀರು ಬಿಡಿಸುವಂತೆ ಒತ್ತಾಯಿಸಿ ಮುಂದುವರಿದ ರೈತರ ಪ್ರತಿಭಟನೆ - Kannada news
ಕೃಷ್ಣ ನದಿ ತೀರದ ರೈತರ ಹೋರಾಟ ಮುಂದುವರಿದಿದೆ. ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ವಿದೇಶ ಪ್ರವಾಸದಿಂದ ಹಿಂದಿರುಗಿದ್ದು, ತಕ್ಷಣ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಕೃಷ್ಣಾ ನದಿ ನೀರು ಹೋರಾಟ ಸಮಿತಿ ಆಗ್ರಹಿಸಿದೆ.
ಜಲಸಂನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಿಂದ ವಾಪಸಾಗಿದ್ದು, ಅವರು ತಕ್ಷಣ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗಬೇಕು. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡಿಸಬೇಕೆಂದು ಹೋರಾಟ ಸಮಿತಿ ಸದಸ್ಯರು ಆಗ್ರಹಿಸಿದ್ದಾರೆ. ಮೂರು ತಿಂಗಳುಗಳಿಂದ ಕೃಷ್ಣಾ ನದಿ ಬತ್ತಿರುವುದರಿಂದ ಸುಮಾರು 300ಕ್ಕೂ ಹೆಚ್ಚು ಗ್ರಾಮಳಿಗೆ ಕುಡಿಯಲು ನೀರಿಲ್ಲ ಎಂದು ರೈತರು ಹೇಳಿದರು.
ಪ್ರತಿ ವರ್ಷವೂ ಇದೇ ಗೋಳು, ಅದಕ್ಕಾಗಿ ಶಾಶ್ವತ ಪರಿಹಾರ ಕೋರಿ, ನಿರಂತರ ಪ್ರತಿಭಟನೆಗೆ ಕೃಷ್ಣಾ ನದಿ ನೀರು ಹೋರಾಟ ಸಮಿತಿ ಮುಂದಾಗಿದೆ. ಭಜನೆ ಮೂಲಕ ರೈತರು ವಿನೂತನವಾಗಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.