ಕರ್ನಾಟಕ

karnataka

ETV Bharat / state

ಚಿಕ್ಕೋಡಿ: ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ - chikkodi latest news

ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬೆಳದಿದ್ದ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ಗಿಡಗಳನ್ನು ರಾಯಬಾಗ ಅಬಕಾರಿ ಇನ್ಸ್​​​​ಪೆಕ್ಟರ್ ಜೆಟ್ಟೆಪ್ಪಾ ಮಾಳಾಬಗಿ ನೇತೃತ್ವದ ತಂಡ ದಾಳಿ ನಡೆಸಿ ವಶಪಡಿಸಿಕೊಂಡಿದೆ.

ಗಾಂಜಾ
ಗಾಂಜಾ

By

Published : Oct 1, 2021, 7:55 AM IST

ಚಿಕ್ಕೋಡಿ: ಚಿಂಚಲಿ ಪಟ್ಟಣದ ಗಣಿಕೋಡಿ‌ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ ಒಂದೂವರೆ ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಗಾಂಜಾ ಗಿಡಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕೋಡಿ ಉಪವಿಭಾಗದ ರಾಯಬಾಗ ತಾಲೂಕಿನ ಗಣಿಕೋಡಿ ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಅಣ್ಣಾಸಾಬ್ ಬಾಬು ಧರ್ಮಣ್ಣವರ ಎಂಬುವರು ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದರು‌.

ಈ ಕುರಿತು ಖಚಿತ ಮಾಹಿತಿ ಮೇರೆಗೆ ರಾಯಬಾಗ ಅಬಕಾರಿ ಇನ್ಸ್​ಪೆಕ್ಟರ್ ಜೆಟ್ಟೆಪ್ಪಾ ಮಾಳಾಬಗಿ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿ, ಅಕ್ರಮವಾಗಿ ಬೆಳೆದಿದ್ದ 1.5 ಲಕ್ಷ ರೂ. ಮೌಲ್ಯದ 15 ಕೆಜಿ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು, ಮಾಲೀಕನ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ABOUT THE AUTHOR

...view details