ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನ ಗೋಕಾಕ ಶಹರ ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ಬೆಳಗಾವಿಯಲ್ಲಿ ಕೆಪಿಟಿಸಿಎಲ್ ಅಕ್ರಮ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..! - ಈಟಿವಿ ಭಾರತ ಕನ್ನಡ
ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ನೀಡಿ, ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವ ಆರೋಪದಡಿ ಮತ್ತೊಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದ ಭೀಮಪ್ಪ ಸಿದ್ದಪ್ಪ ಗುದಿಗೊಪ್ಪ ಬಂಧಿತ ಆರೋಪಿಯಾಗಿದ್ದಾನೆ. ಕೆಪಿಟಿಸಿಎಲ್ ಪರೀಕ್ಷೆ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಈಗಾಗಲೇ ಗೋಕಾಕ ಶಹರ ಪೊಲೀಸರು 22ಆರೋಪಿಗಳನ್ನ ಬಂಧಿಸಿದ್ದು ಸದ್ಯ ಬಂಧಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಇಂದು ಬಂಧಿತನಾಗಿರುವ ಭೀಮಪ್ಪ ಗುದಿಗೊಪ್ಪ, ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ನೀಡಿ, ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವುದಾಗಿ ಮತ್ತು ಎಲೆಕ್ಟ್ರಾನಿಕ್ ಡಿವೈಸ್ ಖರೀದಿಸಲು ಹಣ ಕೂಡ ನೀಡಿದ ಆರೋಪದಡಿ ಭೀಮಪ್ಪನನ್ನು ಬಂಧಿಸಲಾಗಿದೆ. ಈತನಿಂದ 6ಮೊಬೈಲ್, 1ಲ್ಯಾಪಟಾಪ್, 3ಎಲೆಕ್ಟ್ರಾನಿಕ್ ಡಿವೈಸ್, ಕಾರು ಜಪ್ತಿ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ:ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣ: ಮತ್ತೆ ಇಬ್ಬರ ಬಂಧನ.. ಆರೋಪಿಗಳ ಸಂಖ್ಯೆ 22ಕ್ಕೆ ಏರಿಕೆ