ಬೆಳಗಾವಿ:ನೆರೆಯ ಮಹಾರಾಷ್ಟ್ರ ನಂಟು ಜಿಲ್ಲೆಯನ್ನು ಬಿಟ್ಟು ಬಿಡದೆ ಕಾಡುತ್ತಿದೆ. ಮುಂಬೈನಿಂದ ಮರಳಿದ್ದ ಯುವತಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 312ಕ್ಕೆ ಏರಿಕೆಯಾಗಿದೆ.
ಮುಂಬೈನಿಂದ ಜಿಲ್ಲೆಗೆ ಮರಳಿದ್ದ 20 ವರ್ಷದ ಯುವತಿಯ ಗಂಟಲು ದ್ರವವನ್ನು ಪ್ರಯೋಗಾಲಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಯುವತಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.