ಬೆಳಗಾವಿ: ರಾಷ್ಟ್ರಕವಿ ಕುವೆಂಪು ಪ್ರಾಧಿಕಾರಕ್ಕೆ ಒಂದು ಕೋಟಿ ರೂಪಾಯಿ ಮಂಜೂರು ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಕುಪ್ಪಳಿಯ ಕುವೆಂಪು ಕವಿಮನೆ, ಹೇಮಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ದುರಸ್ತಿ ಹಾಗೂ ಸುಣ್ಣ ಬಣ್ಣ ಕಾಮಗಾರಿಗಳನ್ನು ಕೈಗೊಳ್ಳಲು ಧನಸಹಾಯ ಕೋರಿ ರಾಷ್ಟ್ರಕವಿ ಕುವೆಂಪು ಪ್ರಾಧಿಕಾರದ ಸಮಕಾರ್ಯದರ್ಶಿ ಪತ್ರ ಬರೆದಿದ್ದರು.
ರಾಷ್ಟ್ರಕವಿ ಕುವೆಂಪು ಪ್ರಾಧಿಕಾರಕ್ಕೆ 1 ಕೋಟಿ ರೂ ಮಂಜೂರು - ಈಟಿವಿ ಭಾರತ ಕರ್ನಾಟಕ
ರಾಷ್ಟ್ರಕವಿ ಕುವೆಂಪು ಪ್ರಾಧಿಕಾರದ ಧನ ಸಹಾಯ ಕೋರಿಕೆಗೆ ಸಿಎಂ ಬೊಮ್ಮಾಯಿ ಸ್ಪಂದಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಪ್ರಾಧಿಕಾರಕ್ಕೆ ಒಂದು ಕೋಟಿ ಮಂಜೂರು ಮಾಡಿದ ಸಿಎಂ
ಪ್ರಾಧಿಕಾರದ ಕೋರಿಕೆ ಸ್ಪಂದಿಸಿ ಒಂದು ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಮುಖ್ಯಮಂತ್ರಿಯವರ ಕಾರ್ಯದರ್ಶಿ ಜಯರಾಮ್ ರಾಯಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಬೊಮ್ಮಾಯಿಗೆ ಪಂಚಮಸಾಲಿಗರ ಮೀಸಲಾತಿ ತಲೆಬಿಸಿ; ಬಿಜೆಪಿ ಸರ್ಕಾರದ ಮುಂದಿರುವ ಲೆಕ್ಕಾಚಾರಗಳೇನು?