ಕರ್ನಾಟಕ

karnataka

ETV Bharat / state

ಪ್ರತಿ ಜಿಲ್ಲೆಯಲ್ಲಿ ಒಂದು ದಿನದ ‘‘ಉದ್ಯಮಿಯಾಗು ಉದ್ಯೋಗ ನೀಡು’’ ಕಾರ್ಯಾಗಾರ: ಸಚಿವ ನಿರಾಣಿ - invest karnataka

ಯುವ ಸಮೂಹವು ಸ್ವಯಂ ಉದ್ಯೋಗ ಸ್ಥಾಪಿಸಿ ಬೇರೆಯವರಿಗೂ ನೀಡುವಂತಾಗಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲೆಯ 3-4 ಕೇಂದ್ರಗಳಲ್ಲಿ ‘ಉದ್ಯಮಿಯಾಗು ಉದ್ಯೋಗ ನೀಡು’ ಎಂದು ಒಂದು ದಿನದ ಕಾರ್ಯಗಾರ ಆಯೋಜಿಸಲಾಗವುದು ಎಂದು ಸಚಿವ ಡಾ. ಮುರುಗೇಶ್​ ನಿರಾಣಿ ವಿಧಾನ ಪರಿಷತ್​ನಲ್ಲಿ ತಿಳಿಸಿದರು.

one-day-entrepreneurs-give-jobs-workshop-in-each-district-minister-nirani
ಪ್ರತಿ ಜಿಲ್ಲೆಯಲ್ಲಿ ಒಂದು ದಿನದ ‘‘ಉದ್ಯಮಿಯಾಗು ಉದ್ಯೋಗ ನೀಡು’’ ಕಾರ್ಯಾಗಾರ: ಸಚಿವ ನಿರಾಣಿ

By

Published : Dec 20, 2022, 10:59 PM IST

ಪ್ರತಿ ಜಿಲ್ಲೆಯಲ್ಲಿ ಒಂದು ದಿನದ ‘‘ಉದ್ಯಮಿಯಾಗು ಉದ್ಯೋಗ ನೀಡು’’ ಕಾರ್ಯಾಗಾರ: ಸಚಿವ ನಿರಾಣಿ

ಬೆಳಗಾವಿ: ಯುವಕರು ಸ್ವಯಂ ಉದ್ಯೋಗದಾತರಾಗಲು ನಡೆಸುತ್ತಿರುವ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಾಗಾರ ವಿಶೇಷ ಕಾರ್ಯಕ್ರಮ ಮುಂದುವರೆಯಲಿದ್ದು, ಆಯಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಲಾಗುತ್ತದೆ. ಅದಕ್ಕಾಗಿ ಪ್ರತಿ ಜಿಲ್ಲೆಯ 3-4 ಕೇಂದ್ರಗಳಲ್ಲಿ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಉದ್ಯೋಗ ಹುಡುಕುವ ಬದಲು ಉದ್ಯಮ ಸ್ಥಾಪಿಸಿ ಉದ್ಯೋಗ ಕೊಡುವಂತಾಗಬೇಕು ಎನ್ನುವ ಉದ್ದೇಶದಿಂದ ಕಾರ್ಯಾಗಾರವನ್ನು ನಡೆಸಿ, ಅವಕಾಶಗಳ ಬಗ್ಗೆ ಮತ್ತು ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ತಿಳಿಸಲಾಗುತ್ತಿದೆ.

ಇದರಲ್ಲಿ 50 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ನಂತರ 40-50 ಗಂಟೆಯ ಆನ್‌ಲೈನ್‌ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮ ಮುಂದುವರೆಯಲಿದೆ ಎಂದು ವಿವರಿಸಿದರು.

ಇನ್ವೆಸ್ಟ್ ಕರ್ನಾಟಕದಿಂದ ಎಷ್ಟು ಬಂಡವಾಳ ಬಂದಿದೆ. ಅದರಿಂದ ಆದ ಲಾಭದ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ನವೆಂಬರ್ 2 ರಿಂದ 4ರವರೆಗೆ ಮೂರು ದಿನಗಳ ಕಾಲ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 9,81,784 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಬಗ್ಗೆ ವಿವಿಧ ಯೋಜನೆಗಳನ್ನು ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ.

ಮೂರು ದಿನಗಳ ಕಾಲ ನಡೆದ ಈ ಸಮಾವೇಶದಲ್ಲಿ ಜಪಾನ್, ಫ್ರಾನ್ಸ್, ಇಂಗ್ಲೆಂಡ್, ಜರ್ಮನಿ, ಆಸ್ಟ್ರೇಲಿಯಾ, ದಕ್ಷಿಣ ಕೊರಿಯಾ ಹಾಗೂ ನೆದರ್ಲೆಂಡ್ ಸೇರಿದಂತೆ ಹಲವು ದೇಶಗಳ 15,000 ಪ್ರತಿನಿಧಿಗಳು ಹಾಗೂ ಸುಪ್ರಸಿದ್ಧ ಕಂಪನಿಯ ಸಿಇಓ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂದು ಸಚಿವರು ಸಭೆಗೆ ಉತ್ತರಿಸಿದರು. ಇನ್ವೆಸ್ಟ್ ಕರ್ನಾಟಕದಲ್ಲಿ ಪ್ರಮುಖವಾಗಿ 57 ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಸಚಿವರು ಉತ್ತರಿಸಿದರು.

ಹು-ಧಾ ಸ್ಮಾರ್ಟ್ ಸಿಟಿ ಯೋಜನೆಗೆ 806 ಕೋಟಿ ರೂ.ಬಿಡುಗಡೆ:ಸಚಿವ ಬೈರತಿ ಬಸವರಾಜ ಹುಬ್ಬಳ್ಳಿ-ಧಾರವಾಡ ಸ್ಮಾರ್ಟಸಿಟಿ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ 2015-16 ರಿಂದ 2022-23 ರವರೆಗೆ 806 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಬಿ ಎ ಬಸವರಾಜ ಅವರು ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಸಲಿಂ ಅಹ್ಮದ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸ್ಮಾರ್ಟಸಿಟಿ ಯೋಜನೆಗೆ ರೂ. 1080 ಕೋಟಿ ರೂ. ಅನುದಾನ ನಿಗದಿಯಾಗಿದೆ. ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ಸ್ಮಾರ್ಟ್ ಸಿಟಿ ಯೋಜನೆಯನ್ನು ಪೂರ್ಣಗೊಳಿಸಲು 2023 ಜೂನ್‌ರವರೆಗೆ ಕಾಲಾವಧಿ ನಿಗದಿಪಡಿಸಿದೆ.

ಕಾಮಗಾರಿಗಳ ಸ್ಥಳ ಸರ್ವೇ ಕಾರ್ಯ ನಡೆಸಿ ಪರಿಕಲ್ಪನಾ ವರದಿ ತಯಾರಿಸುವಲ್ಲಿ, ಉದ್ದೇಶಿತ ವಾಹನಗಳಿಗೆ ಮಾನವ ಸಂಪನ್ಮೂಲ ನೇಮಕಾತಿ ವಿಷಯದಲ್ಲಿ ಕಾಲಾವಧಿ ಬೇಕಿರುವುದರಿಂದ ಮತ್ತು ಕೋವಿಡ್-19 ಕಾರಣಗಳಿಂದಲೂ ಅನುಷ್ಠಾನದಲ್ಲಿ ವಿಳಂಬವಾಗಿದೆ ಎಂದು ತಿಳಿಸಿದರು.

ಮಹಿಳಾ ಉದ್ಯಮಗಳ ಸ್ಥಾಪನೆಗೆ ಪರಿಶೀಲನೆ:ಮಹಿಳೆಯರ ಮಾಲೀಕತ್ವ ಮತ್ತು ಒಡೆತನದಲ್ಲಿ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳ ಸ್ಥಾಪನೆಯ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಶೀಲನೆ ನಡೆಸಲಾಗುವುದು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರಾದ ಎನ್.ನಾಗರಾಜ(ಎಂಟಿಬಿ) ಅವರು ಹೇಳಿದರು.

ವಿಧಾನ ಪರಿಷತ್ತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದ ಅಂಶಗಳನ್ನು ತಿಳಿಸಿದ ಸಚಿವರು, ಉದ್ಯಮ ರಿಜಿಸ್ಟ್ರೇಷನ್ ಪೋರ್ಟಲ್‌ನಲ್ಲಿ ಮಹಿಳಾ ಮಾಲೀಕತ್ವದ ಉದ್ಯಮಿಗಳು ಸೇರಿದಂತೆ ಒಟ್ಟಾರೆಯಾಗಿ 7,21,722 ಸೂಕ್ಷ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ನೋಂದಾಯಿಸಲ್ಪಿಟ್ಟಿವೆ ಎಂದು ತಿಳಿಸಿದರು.

ಇದನ್ನೂ ಓದಿ:ಗಡಿ ವಿವಾದ.. ಅಮಿತ್ ಶಾ ಕರೆದ ಸಭೆಗೆ ಸಿಎಂ ಹೋಗಬಾರದಿತ್ತು: ಸಿದ್ದರಾಮಯ್ಯ ಅಸಮಾಧಾನ

ABOUT THE AUTHOR

...view details