ಬೆಳಗಾವಿ:ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ 32 ವರ್ಷದ ವ್ಯಕ್ತಿ ಬಲಿಯಾಗಿದ್ದು, ಸೋಂಕಿಗೆ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
ಇನ್ನೂ ಮುಂಬೈನಿಂದ ಮರಳಿದ್ದ 25 ವರ್ಷದ ಯುವತಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 328ಕ್ಕೆ ಏರಿಕೆಯಾಗಿದೆ.

ಟ್ರಾವೆಲ್ ಹಿಸ್ಟರಿ ಇಲ್ಲದ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ 32 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಹೌದು, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಈ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಈ ವ್ಯಕ್ತಿ ತಡರಾತ್ರಿ ಮೃತಪಟ್ಟಿದ್ದು, ಸದ್ಯ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇತ್ತೀಚೆಗೆ ಮುಂಬೈನಿಂದ ಮರಳಿದ್ದ 25 ವರ್ಷದ ಯುವತಿಗೂ ಸೋಂಕು ತಗುಲಿದ್ದು, ಯುವತಿಯನ್ನು ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಜಿಲ್ಲೆಯಲ್ಲಿ ಸದ್ಯ 23 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.