ಅಥಣಿ: ಟಿಪ್ಪರ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಅಥಣಿ ಪಟ್ಟಣದಲ್ಲಿ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ
ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಸಾವಿಗೀಡಾದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಿಪ್ಪರ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ
ಅಥಣಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಸ್ಥಳಿಯ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೃಷ್ಣಾ ಕಿತ್ತೂರು ಗ್ರಾಮದ ಸಾಗರ ಪರಶುರಾಮ ಮಾಂಗ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಐಗಳಿ ಗ್ರಾಮದ ಲಖನ್ ಮಾದರ ಮತ್ತು ಕಿರಣಗಿ ಗ್ರಾಮದ ಇರ್ಷಾದ್ ಸನದಿ ಗಾಯಗೊಂಡವರು. ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Dec 1, 2020, 9:52 PM IST