ಬೆಳಗಾವಿ: ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು,ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಹತ್ತಿರ ನಿನ್ನೆ ತಡರಾತ್ರಿ ನಡೆದಿದೆ.
ಭೀಕರ ಅಪಘಾತದಲ್ಲಿ ಒಬ್ಬನ ಸಾವು, ಇಬ್ಬರ ಸ್ಥಿತಿ ಗಂಭೀರ: ತಲೆಕೆಳಗಾದ ಕಾರು! - belgaam crime news
ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಹತ್ತಿರ ನಿನ್ನೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.ಇದರಲ್ಲಿ ಓರ್ವ ಸಾವಿಗೀಡಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ತಲೆಕೆಳಗಾಗಿದೆ.
ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ದೇವರಾಜ್ ಪ್ರಕಾಶ್ ಈಳಿಗೇರ ಸಾವಿಗೀಡಾದವರು. ಕಿರಣ್ ಸಾಗರ ಹಾಗೂ ಆಕಾಶ್ ಗುರುವಣ್ಣವರ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಮೂವರು 22 ವಯಸ್ಸಿನ ಯುವಕರಾಗಿದ್ದಾರೆ ಎನ್ನಲಾಗಿದೆ.
ಮೂವರು ಯುವಕರು ಕಾರಿನಲ್ಲಿ ಎಂ.ಕೆ.ಹುಬ್ಬಳ್ಳಿ ಹತ್ತಿರ ನದಿ ನೋಡಲು ಹೋಗಿದ್ದರು. ಈ ವೇಳೆ, ಎಂ.ಕೆ.ಹುಬ್ಬಳ್ಳಿ ಬಳಿಯ ಹೂವಿನ ಹಳ್ಳದ ಪೆಟ್ರೋಲ್ ಬಂಕ್ ಸಮೀಪ ಈ ಅವಘಡ ಸಂಭವಿಸಿದೆ. ಸ್ಥಳದಲ್ಲಿಯೇ ಓರ್ವ ಮೃತಪಟ್ಟರೆ, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.