ಬೆಳಗಾವಿ :ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾತಂಕ ಹೆಚ್ಚುತ್ತಿದೆ. ಡೆಡ್ಲಿ ಕೊರೊನಾಗೆ ಗೋಕಾಕ್ ನಗರದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಗೋಕಾಕ್ನಲ್ಲಿ ಕೊರೊನಾ ಅಟ್ಟಹಾಸ : 46 ವರ್ಷದ ಮಹಿಳೆ ಸಾವು !
ತೀವ್ರ ಉಸಿರಾಟ ಸಮಸ್ಯೆ ಹಾಗೂ ಜ್ವರದಿಂದ ಬಳಲುತ್ತಿದ್ದ ಗೋಕಾಕ್ನ 46 ವರ್ಷದ ಮಹಿಳೆಯೊಬ್ಬರನ್ನು ನಿನ್ನೆಯಷ್ಟೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ.
ಗೋಕಾಕ್ನಲ್ಲಿ ಕೊರೊನಾ ಅಟ್ಟಹಾಸ
ತೀವ್ರ ಉಸಿರಾಟ ಸಮಸ್ಯೆ ಹಾಗೂ ಜ್ವರದಿಂದ ಬಳಲುತ್ತಿದ್ದ 46 ವರ್ಷದ ಮಹಿಳೆಯನ್ನು ನಿನ್ನೆಯಷ್ಟೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ.
24 ಗಂಟೆ ಅವಧಿಯಲ್ಲಿ ಕೋವಿಡ್ ವಾರ್ಡ್ನಲ್ಲಿದ್ದ ಜಿಲ್ಲೆಯ ಇಬ್ಬರು ಮೃತರಾಗಿದ್ದಾರೆ. ಅಥಣಿಯ 60 ವರ್ಷದ ವ್ಯಕ್ತಿ ಹಾಗೂ ಗೋಕಾಕ್ದ ಮಹಿಳೆ ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ.