ಕರ್ನಾಟಕ

karnataka

ETV Bharat / state

ಬೆಳಗಾವಿಯ 13 ವರ್ಷದ ಬಾಲಕಿಗೆ ಕೊರೊನಾ: ಸೋಂಕಿತರ ಸಂಖ್ಯೆ 74ಕ್ಕೆ - ಕೋವಿಡ್ ವಾರ್ಡ್

ತಾಲೂಕಿನ ಹಿರೇಬಾಗೇವಾಡಿಯ 13 ವರ್ಷದ ಬಾಲಕಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಾಲಕಿಗೆ ಕೋವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

corona
ಕೊರೊನಾ

By

Published : May 7, 2020, 2:42 PM IST

ಬೆಳಗಾವಿ:ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, 4 ದಿನಗಳ ಬಳಿಕ ಬೆಳಗಾವಿಯಲ್ಲಿ ಇಂದು ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ‌.

ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. ತಾಲೂಕಿನ ಹಿರೇಬಾಗೇವಾಡಿಯ ಬಾಲಕಿಗೆ ಸೋಂಕು ದೃಢವಾಗಿದೆ. ರೋಗಿ ಸಂಖ್ಯೆ 364ರ ಪ್ರಾಥಮಿಕ ಸಂಪರ್ಕದಲ್ಲಿದ್ದ 13 ವರ್ಷದ ಬಾಲಕಿಗೆ ಸೋಂಕು ತಗುಲಿದೆ.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮವೊಂದರಲ್ಲೇ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. 74 ಸೋಂಕಿತರ ಪೈಕಿ ಓರ್ವ ವೃದ್ಧೆ ಮೃತಪಟ್ಟಿದ್ದು, 34 ಸೋಂಕಿತರು ಗುಣಮುಖರಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 39 ಕೊರೊನಾ ಆ್ಯಕ್ಟೀವ್ ಪ್ರಕರಣಗಳಿದ್ದು, ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details