ಕರ್ನಾಟಕ

karnataka

ETV Bharat / state

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬೆಳಗಾವಿಯ ಮಹಿಳೆಗೆ ಸೋಂಕು ದೃಢ - ಬೆಳಗಾವಿ ಲೆಟೆಸ್ಟ್ ನ್ಯೂಸ್

ವಂಟಮೂರಿ ಕಾಲನಿ ನಿವಾಸಿಯಾಗಿರುವ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ..

Belagavi corona case
Belagavi corona case

By

Published : Jun 26, 2020, 8:54 PM IST

ಬೆಳಗಾವಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 30 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 317ಕ್ಕೆ ಏರಿಕೆಯಾಗಿದೆ.

ವಂಟಮೂರಿ ಕಾಲೋನಿ ನಿವಾಸಿಯಾಗಿರುವ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಇಂದು ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತ ಮಹಿಳೆಯನ್ನು ಕೋವಿಡ್-19 ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಯಾವುದೇ ಟ್ರಾವೆಲಿಂಗ್ ಹಿಸ್ಟರಿ ಇಲ್ಲದೆ ಸೋಂಕು ತಗುಲಿರುವ ಜಿಲ್ಲೆಯ ನಾಲ್ಕನೇ ಪ್ರಕರಣ ಇದಾಗಿದೆ.

ಇನ್ನೂ ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಸೋಂಕಿತ ಇಂದು ಗುಣಮುಖರಾಗಿ ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ABOUT THE AUTHOR

...view details