ಚಿಕ್ಕೋಡಿ(ಬೆಳಗಾವಿ):ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಮತ್ತು ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕೆಲ ಸಂಘಟನೆಗಳು ಬೆಂಬಲ ಸೂಚಿಸಿದರೆ, ಕೆಲ ಸಂಘಟನೆಗಳು ಬೆಂಬಲ ಸೂಚಿಸಿಲ್ಲ.
ಕರ್ನಾಟಕ ಬಂದ್ಗೆ: ಚಿಕ್ಕೋಡಿಯ ಸಂಘಟನೆಗಳ ಮಧ್ಯೆ ಭಿನ್ನಾಭಿಪ್ರಾಯ
ರೈತ ಮತ್ತು ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕೆಲ ಸಂಘಟನೆಗಳು ಬೆಂಬಲ ಸೂಚಿಸಿದರೆ, ಕೆಲ ಸಂಘಟನೆಗಳು ಬೆಂಬಲ ಸೂಚಿಸಿಲ್ಲ.
ಕರ್ನಾಟಕ ಬಂದ್ಗೆ ಚಿಕ್ಕೋಡಿಯ ಕೆಲ ಸಂಘಟನೆಗಳಿಂದ ಮಾತ್ರ ಬೆಂಬಲ
ಚಿಕ್ಕೋಡಿಯ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ದಲಿತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಕಾರ್ಮಿಕ ಸಂಘಗಳು, ಲಾರಿ, ಆಟೋ-ಟ್ಯಾಕ್ಸಿ ಮಾಲೀಕರ ಸಂಘ, ಚಾಲಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘಟನೆ, ಜಿಲ್ಲಾ ವಕೀಲರ ಸಂಘಟನೆ, ವರ್ತಕರ ಸಂಘ, ಹೋಟೆಲ್ ಮಾಲೀಕರ ಸಂಘ ಹಾಗೂ ಹಾಲು ಉತ್ಪಾದಕರ ಸಂಘಗಳು ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸಿವೆ.
ಎಬಿವಿಪಿ, ಜಿಲ್ಲಾ ಸರ್ಕಾರಿ ನೌಕರರ ಸಂಘ, ಹಿಂದೂ ಪರ ಸಂಘಟನೆಗಳು, ಕೆಎಸ್ಆರ್ಟಿಸಿ ಚಾಲಕರು ಹಾಗೂ ನಿರ್ವಾಹಕರ ಸಂಘ ಸೇರಿ ಇನ್ನು ಕೆಲ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿಲ್ಲ.