ಬೆಳಗಾವಿ:ಆಪರೇಷನ್ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಯಾವುದೇ ಪಕ್ಷ ಆಪರೇಷನ್ ಮಾಡಿದರೂ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸಕ್ಕರೆ ಖಾತೆ ಸಚಿವ ಸಚಿವ ಆರ್ ಬಿ ತಿಮ್ಮಾಪುರ ಅಭಿಪ್ರಾಯ ವ್ಯಕ್ತಪಡಿಸಿದರು.
ಆಪರೇಷನ್ ಕಮಲ ಮಾಡುತ್ತೇವೆ ಎಂಬುದು ಹೇಸಿಗೆ ಕೆಲಸ : ಸಚಿವ ಆರ್ ಬಿ ತಿಮ್ಮಾಪುರ - ಆಪರೇಷನ್
ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಸಮನ್ವಯದ ಕೊರತೆ ಇಲ್ಲ. ಎರಡೂ ಪಕ್ಷಗಳನ್ನು ಒಟ್ಟಾಗಿ ನಡೆಸಿಕೊಂಡು ಹೋಗುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಜಿಡಿಎಸ್ ಪಕ್ಷದಲ್ಲಿರುವ ಜಗಳ ಅವರಿಗೇ ಸಂಬಂಧಪಟ್ಟಿದ್ದಾಗಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.
ನಗರದಲ್ಲಿ ನಡೆದ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಅದರಂತೆ ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತೇವೆ ಎಂಬುದು ಹೇಸಿಗೆ ಕೆಲಸ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಬೆಳವಣಿಗೆಗಳು ನಡೆಯುತ್ತಿರುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಸಮನ್ವಯದ ಕೊರತೆ ಇಲ್ಲ. ಎರಡೂ ಪಕ್ಷಗಳನ್ನು ಒಟ್ಟಾಗಿ ನಡೆಸಿಕೊಂಡು ಹೋಗುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಜೆಡಿಎಸ್ ಪಕ್ಷದಲ್ಲಿರುವ ಜಗಳ ಅವರಿಗೇ ಸಂಬಂಧಪಟ್ಟಿದ್ದಾಗಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.