ಕರ್ನಾಟಕ

karnataka

ETV Bharat / state

ಐನಾಪೂರ ಪ.ಪಂಚಾಯತ್‌ನಲ್ಲಿ ಆಪರೇಶನ್ ಕಮಲ ; ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ - Panchayat Election 2020

ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರು ತಮ್ಮ ನಾಮಪತ್ರ ಹಿಂದಕ್ಕೆ ತೆಗೆದುಕೊಂಡಿದ್ದರಿಂದ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ..

Operation Kamala In Ainapur Town Panchayat Election
ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿಗಳು

By

Published : Nov 9, 2020, 5:44 PM IST

ಚಿಕ್ಕೋಡಿ :ಕಾಗವಾಡ ತಾಲೂಕಿನ ಐನಾಪೂರ ಪಟ್ಟಣ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಮ್ಮಣ್ಣಾ ಶಿವನಗೌಡ ಪಾರಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಗೀತಾ ನಾಮದೇವ ಕೆಂಗಾರೆ ಆಯ್ಕೆಯಾಗಿದ್ದಾರೆ.

ಪಟ್ಟಣ ಪಂಚಾಯತ್ದಲ್ಲಿ ಒಟ್ಟು 19 ಅಭ್ಯರ್ಥಿಗಳು ಚುನಾಯಿತ ಸದಸ್ಯರಿದ್ದು ಒಬ್ಬ ಸದಸ್ಯರು ಮರಣ ಹೊಂದಿದ್ದಾರೆ. ಒಟ್ಟು 18 ಸದಸ್ಯರುಗಳಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೂವರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದರು‌.

ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರು ತಮ್ಮ ನಾಮಪತ್ರ ಹಿಂದಕ್ಕೆ ತೆಗೆದುಕೊಂಡಿದ್ದರಿಂದ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.

ಆಪರೇಶನ ಕಮಲ :ಪಟ್ಟಣ ಪಂಚಾಯತ್‌ 19 ಸದಸ್ಯರುಗಳಿದ್ದು, ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಧ್ಯಕ್ಷ ಸ್ಥಾನ ಪಡೆದುಕೊಂಡಿದ್ದರು. ಆದರೆ, ಈ ಬಾರಿ ಪಟ್ಟಣದಲ್ಲಿ ಆಪರೇಶನ ಕಮಲ ಮಾಡಿದ್ದು ಕಾಂಗ್ರೆಸ್​​ ಅಭ್ಯರ್ಥಿಗಳು ಹೆಚ್ಚಿದ್ದರೂ ಸಹ ಬಿಜೆಪಿ ಅಧ್ಯಕ್ಷ ಸ್ಥಾನ ಅಲಂಕರಿಸಿದೆ.

ಪಟ್ಟಣದ ಜನತೆಯಲ್ಲಿ ಗೊಂದಲ ಸೃಷ್ಟಿಯಾಗಿದೆ. ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಆಪರೇಶನ್ ಕಮಲವಾಗಿದ್ದು, ಬಿಜೆಪಿ ಕಾರ್ಯಕರ್ತರು ಪಟಾಕಿ‌ ಸಿಡಿಸಿ ಸಂಭ್ರಮಿಸಿದರು.

ABOUT THE AUTHOR

...view details