ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಮನೆ ಮೇಲಿನ ಸಿಬಿಐ ದಾಳಿಗೆ ಸಂಬಂಧಿಸಿ ಬೆಳಗಾವಿಯಲ್ಲಿ ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯ ಕುವೆಂಪು ನಗರದ ಅವರ ನಿವಾಸದೆದುರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ದಾಳಿ ಎದುರಿಸಲು ನಮ್ಮ ನಾಯಕರು ಸಮರ್ಥರಿದ್ದಾರೆ. ಉಪಚುನಾವಣೆ ಸಂದರ್ಭದಲ್ಲಿ ರಾಜಕೀಯ ದುರುದ್ದೇಶವಿಟ್ಟುಕೊಂಡು ದಾಳಿ ಮಾಡಲಾಗಿದೆ.
ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳ್ಕರ್ ಇಡಿ ಆಯ್ತು, ಐಟಿ ಬಳಿಕ ಈಗ ಮತ್ತೆ ಸಿಬಿಐ ದಾಳಿ ಮಾಡಿದ್ದಾರೆ. ಕಾನೂನಿಗೆ ತಲೆ ಭಾಗಬೇಕಾಗುತ್ತದೆ. ನಮ್ಮ ನಾಯಕರು ಸಮರ್ಥರು ಇದ್ದಾರೆ. ಕಾನೂನು ಹೋರಾಟದ ಮೂಲಕ ಅವರು ಹ್ಯಾಂಡಲ್ ಮಾಡ್ತಾರೆ. ಅಹ್ಮದ್ ಪಟೇಲ್ ಅವರ ರಾಜ್ಯಸಭೆ ಚುನಾವಣೆ ವೇಳೆಯೂ ಡಿಕೆಶಿ ಮನೆ ಮೇಲೆ ಐಟಿ ದಾಳಿ ಮಾಡಲಾಗಿತ್ತು.
ಇದೀಗ ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದೆ. ಪಕ್ಷದ ಎಲ್ಲ ನಾಯಕರು ಚುನಾವಣೆ ಎದುರಿಸಲು ಸಕ್ರಿಯರಾಗಿದ್ದಾರೆ. ಈ ವೇಳೆಯೇ ಮತ್ತೆ ಸಿಬಿಐ ದಾಳಿ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಂಬುವುದನ್ನು ಜನರೇ ತೀರ್ಮಾನಿಸುತ್ತಾರೆ ಎಂದರು.