ಕರ್ನಾಟಕ

karnataka

ETV Bharat / state

ನಮ್ಮದು ಆರ್​ಎಸ್ಎಸ್ ಹಿನ್ನೆಲೆಯ ಕುಟುಂಬ: ಸಚಿವ ರಮೇಶ್ ಜಾರಕಿಹೊಳಿ‌

ಜನವರಿ 17ರಂದು ಬೆಳಗಾವಿಯಲ್ಲಿ ಅಮಿತ್ ಶಾ ಕಾರ್ಯಕ್ರಮ ಇದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಒಂದು ಲಕ್ಷ ಜನ ಬರಬೇಕು. ಸಾರಿಗೆ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡುತ್ತೇನೆ. ಕಾರ್ಯಕ್ರಮಕ್ಕೆ ಮೂರರಿಂದ ನಾಲ್ಕು ಲಕ್ಷ ಜನ ಸೇರಿಸುತ್ತೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ.

By

Published : Jan 10, 2021, 4:52 PM IST

dsd
ಆರ್​ಎಸ್ಎಸ್ ಹಿನ್ನೆಲೆಯ ಕುಟುಂಬ ಎಂದ ಸಚಿವ ರಮೇಶ್ ಜಾರಕಿಹೊಳಿ‌

ಬೆಳಗಾವಿ: ನಮ್ಮದು ಆರ್​ಎಸ್ಎಸ್ ಹಿನ್ನೆಲೆಯ ಕುಟುಂಬ. ಜನಸಂಘದಿಂದಲೂ ನಮ್ಮ ಕುಟುಂಬ ಸಂಘದೊಂದಿಗೆ ಇದೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ.

ಆರ್​ಎಸ್ಎಸ್ ಹಿನ್ನೆಲೆಯ ಕುಟುಂಬ ಎಂದ ಸಚಿವ ರಮೇಶ್ ಜಾರಕಿಹೊಳಿ‌

ತಾಲೂಕಿನ ನಾವಲೆ ಗ್ರಾಮದ ಗಣೇಶ ಭಾಗದಲ್ಲಿ ನಡೆದ ಹಿಂದೂ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಆರ್​ಎಸ್ಎಸ್ ಪೂರ್ವವೇ ಇದ್ದ ಜನಸಂಘದ ಜೊತೆಗೆ ನಾವಿದ್ದೇವೆ. ಆಗ ನಾವು ದೀಪದ ಚಿತ್ರ ಇದ್ದ ಕರಿ ಟೋಪಿ ಹಾಕುತ್ತಿದ್ದೆವು. ಸಂಘದಲ್ಲಿದ್ದಾಗ ನಮ್ಮ ತಂದೆ ಮೂರು ತಿಂಗಳು ಜೈಲಿನಲ್ಲಿದ್ದರು. ನಾವು ಉದಯವಾಗಿದ್ದು ಜನಸಂಘದಿಂದ. ಹಾಫ್ ಚಡ್ಡಿ ಹಾಕುತ್ತಿದ್ದೇವು. ಆದರೆ ಅನಿವಾರ್ಯವಾಗಿ ಕಾಂಗ್ರೆಸ್​ಗೆ ಹೋಗಬೇಕಾಯಿತು. ನನ್ನ ತಂದೆ ಜಗನ್ನಾಥ್​ ಜೋಶಿಯವರ ಫಾಲೋವರ್ಸ್ ಆಗಿದ್ದರು. ಗೋವಾ ವಿಮೋಚನೆಗಾಗಿ ಹೋರಾಟ ಮಾಡಿ ಮೂರು ತಿಂಗಳು ಜೈಲಿನಲ್ಲಿದ್ದರು ಎಂದರು.

ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಟಿಕೆಟ್ ಯಾರಿಗೆ ಸಿಗುತ್ತೆ ಗೊತ್ತಿಲ್ಲ. ಆದರೆ ಎಲ್ಲರನ್ನೂ ಕೊಲ್ಲಾಪುರದ ಜ್ಯೋತಿಬಾ ದೇವಸ್ಥಾನಕ್ಕೆ ಕರೆದೊಯ್ಯುತ್ತೇನೆ. ಪಕ್ಷದ ಪರವಾಗಿ ಕೆಲಸ ಮಾಡಬೇಕು ಎಂಬ ಕಾರಣಕ್ಕೆ ಆಣೆ ಮಾಡಿಸುತ್ತೇನೆ. ಆಗಲೇ ಇಲ್ಲಿ ಬಿಜೆಪಿ ಗೆಲುವು ಸಾಧ್ಯ. 2023ರಲ್ಲಿ ಇಲ್ಲಿ ಭಗವಾ ಧ್ವಜ ಹಾರಿಸುವ ಸಂಕಲ್ಪ ಮಾಡಬೇಕು ಎಂದರು.

ABOUT THE AUTHOR

...view details