ಬೆಳಗಾವಿ :ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರ ಹೊರಗೆ ಶನಿವಾರ ನಡೆಯುತ್ತಿದ್ದ ಸಂಭ್ರಮಾಚಣೆಯಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿದೆ. ಮತ ಎಣಿಕೆ ಕೇಂದ್ರದ ಸಮೀಪ ಆರ್‌ಪಿಡಿ ಕ್ರಾಸ್‌ನಲ್ಲಿ ಚುನಾವಣೆ ಗೆಲುವಿನ ಸಂಭ್ರಮಾಚರಣೆ ಮಾಡಲು ಸೇರಿದ್ದ ಜನರ ಗುಂಪಿನಲ್ಲಿ ಕೆಲ ಯುವಕರು, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಶಾಂತಿ ಕದಡಲು ಯತ್ನಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಘೋಷಣೆ ಕೂಗಿ ಗುಂಪಿನಲ್ಲಿದ್ದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ - ಪಾಕಿಸ್ತಾನ ಜಿಂದಾಬಾದ್
ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೆಲ ಕಿಡಿಗೇಡಿಗಳು ಘೋಷಣೆ ಕೂಗಿರುವ ಘಟನೆ ನಡೆದಿದೆ.
ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್, ಭಟ್ಕಳದಲ್ಲಿ ಇಸ್ಲಾಮಿಕ್ ಬಾವುಟ ಹಾರಾಟ: ಕಿಡಿಗೇಡಿಗಳಿಂದ ಶಾಂತಿ ಕದಡಲು ಯತ್ನ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಟಿಳಕ್‌ವಾಡಿ ಠಾಣಾಧಿಕಾರಿ, "ವಿಡಿಯೋ ಪರಿಶೀಲನೆ ನಡೆಸಲಾಗುತ್ತಿದ್ದು, ಘೋಷಣೆ ಕೂಗಿದವರ ವಿರುದ್ಧ ಎಫ್‌ಐಆರ್ ದಾಖಲಿಸುತ್ತೇವೆ" ಎಂದು ತಿಳಿಸಿದ್ದಾರೆ. 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಅಂದಿನ ಕಾಂಗ್ರೆಸ್ ಅಭ್ಯರ್ಥಿ ಫಿರೋಜ್ ಸೇಠ್ ಪ್ರಚಾರ ಸಂದರ್ಭದಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ತೀವ್ರ ಚರ್ಚೆಗೆ ಕಾರಣವಾಗಿತ್ತು.
ಇದನ್ನೂ ಓದಿ:ಬೆಣ್ಣೆನಗರಿಯಲ್ಲಿ ಕಾಂಗ್ರೆಸ್ ಕೈ ಹಿಡಿದ ಮತದಾರ: ದಾವಣಗೆರೆಯಲ್ಲಿ ಗೆದ್ದು ಬೀಗಿದ ಅಪ್ಪ, ಮಗ
Last Updated : May 14, 2023, 6:27 AM IST