ಬೆಳಗಾವಿ:ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕ್ರಮ ಜರುಗಿಸುವಂತೆ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ್ ಬಿಜೆಪಿ ನಾಯಕರಿಗೆ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಕ್ಕೆ ಪಂಚಮಸಾಲಿ ಸಮುದಾಯ ಇದೆ. ಸಂಜಯ್ ಪಾಟೀಲ್ ಹೇಳಿಕೆಯನ್ನ ಲಿಂಗಾಯತ ಪಂಚಮಸಾಲಿ ಸಮುದಾಯ ಖಂಡಿಸುತ್ತದೆ. ಪಂಚಮಸಾಲಿ ಲಿಂಗಾಯತ ಸಮುದಾಯದ ಶಾಸಕಿ ಬಗ್ಗೆ ಸಂಜಯ್ ಪಾಟೀಲ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ಅವರ ಹೇಳಿಕೆ ನೋಡಿದ್ದೇವೆ ಎಂದರು.