ಬೆಳಗಾವಿ :ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗಿರುವ ಜಿಲ್ಲಾ ನ್ಯಾಯಾಲಯದಲ್ಲಿನ ರಸ್ತೆ ಪಕ್ಕದಲ್ಲಿ ಕಾರು ಪಾರ್ಕಿಂಗ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲರು-ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು.
ನಗರದ ಜಿಲ್ಲಾ ನ್ಯಾಯಾಲಯದ ಎದುರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರೊಬ್ಬರು ರಸ್ತೆ ಪಕ್ಕದಲ್ಲಿ ಕಾರ್ ಪಾರ್ಕಿಂಗ್ ಮಾಡಲು ಮುಂದಾದ ವೇಳೆ ಪಾರ್ಕಿಂಗ್ ಮಾಡದಂತೆ ಪೊಲೀಸ್ ಕಾನ್ಸ್ಸ್ಟೇಬಲ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ ಉತ್ತರಿಸಿರುವ ವಕೀಲರು ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ಇದೇ ಸ್ಥಳದಲ್ಲಿ ಕಾರು ನಿಲ್ಲಿಸುವುದಾಗಿ ತಿಳಿಸಿದ್ದಾರೆ.
ವಕೀಲರು - ಪೊಲೀಸರ ಮಧ್ಯೆ ವಾಗ್ವಾದ.. ಅವಾಚ್ಯ ಶಬ್ಧಗಳಿಂದ ವಕೀಲರಿಗೆ ನಿಂದನೆ :ಆಗ ಪೊಲೀಸ್ ಪೇದೆ ಹಾಗೂ ವಕೀಲರ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ವಕೀಲರಿಗೆ ಅವಾಚ್ಯ ಶಬ್ಧಗಳಿಂದ ಪೊಲೀಸ್ ಕಾನ್ಸ್ಸ್ಟೇಬಲ್ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಸ್ಥಳಕ್ಕೆ ಸಿಬ್ಬಂದಿಯನ್ನು ಕರೆಯಿಸುವಂತೆ ಒತ್ತಾಯಿಸಿ ಎಲ್ಲ ವಕೀಲರು ರಸ್ತೆ ತಡೆದು ಪ್ರತಿಭಟಿಸಿದರು. ಇದರಿಂದಾಗಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಚೆನ್ನಮ್ಮ ವೃತ್ತದಿಂದ ಜಿಲ್ಲಾ ನ್ಯಾಯಾಲಯದವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಎಸಿಪಿ ನಾರಾಯಣ ಭರಮಣಿ, ಟ್ರಾಫಿಕ್ ಸಿಪಿಐ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿ ನಂತರ ಪೊಲೀಸ್ ಕಾನ್ಸ್ಸ್ಟೇಬಲ್ನ ಸ್ಥಳಕ್ಕೆ ಕರೆಯಿಸಿ ಕ್ಷಮೆ ಕೇಳಿಸಿದರು. ಈ ವೇಳೆ ಮತ್ತೊಬ್ಬ ವಕೀಲ, ಕಾನ್ಸ್ಸ್ಟೇಬಲ್ಗೆ ಕೈಜೋಡಿಸಿ ಸಾರಿ ಕೇಳು ಎಂದರು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಪರಿಸ್ಥಿತಿ ತಿಳಿಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.