ಬೆಳಗಾವಿ: ಬೋರ್ವೆಲ್ನಲ್ಲಿ ನೀರು ಬರುತ್ತಿದ್ದರೂ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿರುವ ಎಂ.ಕೆ.ಹುಬ್ಬಳ್ಳಿಯ ಪಟ್ಟಣ ಪಂಚಾಯಿತಿ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಟ್ಯಾಂಕರ್ ನೀರಿನಲ್ಲೂ ಗೋಲ್ಮಾಲ್ ಆರೋಪ: ಸ್ಥಳೀಯರಿಂದ ಅಧಿಕಾರಿಗಳಿಗೆ ತರಾಟೆ - kannadanews
ಬೋರ್ ವೆಲ್‍ನಲ್ಲಿ ನೀರು ಬರುತ್ತಿದ್ದರೂ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದಾರೆ ಎಂದು ಅಧಿಕಾರಿಗಳಿಗೆ ಸ್ಥಳೀಯರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಸ್ಥಳೀಯರಿಂದ ಅಧಿಕಾರಿಗಳಿಗೆ ತರಾಟೆ
ಸರ್ಕಾರದ ಹಣ ಲೂಟಿ ಮಾಡಲು ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದಾರೆ. ಬೋರ್ವೆಲ್ನಲ್ಲಿ ನೀರು ಬರುತ್ತಿದ್ದರೂ ಕಳೆದ ಹಲವು ದಿನಗಳಿಂದ ನೀರು ಬಿಡುತ್ತಿಲ್ಲ. ಈಗ ಹಣ ಲೂಟಿ ಮಾಡಲು ಟ್ಯಾಂಕರ್ ಬಳಕೆ ಮಾಡುತ್ತಿದ್ದೀರಿ ಎಂದು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ನಮಗೆ ಟ್ಯಾಂಕರ್ ನೀರು ಬೇಡ. ತಕ್ಷಣವೇ ಬೋರ್ವೆಲ್ ಮೂಲಕವೇ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸ್ಥಳೀಯರು ಆಗ್ರಹಿಸಿದ್ದಾರೆ.