ಕರ್ನಾಟಕ

karnataka

ETV Bharat / state

ಪೀರನವಾಡಿಯಲ್ಲಿ ಎಂಇಎಸ್​​ ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

ಬೆಳಗಾವಿ ಜಿಲ್ಲೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಸ್ಥಾಪನೆಗೆ ಸಂಬಂಧಿಸಿದಂತೆ ಪೀರನವಾಡಿಯಲ್ಲಿ ಪೊಲೀಸರು ಲಾಠಿ ಬೀಸಿದ್ದಾರೆ.

dsd
ಎಂಇಎಸ್ ಕಾರ್ಯಕರ್ತರಿಗೆ ಲಾಠಿ ರುಚಿ

By

Published : Aug 28, 2020, 11:22 AM IST

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪುತ್ಥಳಿ ಮರುಸ್ಥಾಪನೆ ಬಳಿಕ ಬೈಕ್ ರ್ಯಾಲಿ ನಡೆಸಿದ ಕನ್ನಡ ಸಂಘಟನೆ ಕಾರ್ಯಕರ್ತರ ಮೇಲೆ ಚಪ್ಪಲಿ ಎಸೆದು, ಕಲ್ಲು ತೂರಾಟ ನಡೆಸಲು ಮುಂದಾದ ಎಂಇಎಸ್ ಕಾರ್ಯಕರ್ತರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಎಂಇಎಸ್ ಕಾರ್ಯಕರ್ತರಿಗೆ ಲಾಠಿ ರುಚಿ

ಇದರಿಂದ ಪೀರನವಾಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಕಿಡಿಗೇಡಿಗಳು ತೂರಿದ ಕಲ್ಲುಗಳು ಕೆಲ ಪೊಲೀಸ್ ಸಿಬ್ಬಂದಿಗೂ ತಾಗಿದೆ. ಮೊದಲು ಬೈಕ್ ರ್ಯಾಲಿ ನಡೆಸಲು ಮುಂದಾದ ಕನ್ನಡ ಸಂಘಟನೆ ಕಾರ್ಯಕರ್ತರ ಮೇಲೆ ಸಹ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಹಳದಿ ಧ್ವಜ ಹಿಡಿದು ರಾಯಣ್ಣನ ಅಭಿಮಾನಿಗಳು ಮೆರವಣಿಗೆ ಮಾಡುತ್ತಿರುವುದನ್ನು ಪೊಲೀಸರು ತಡೆದಿದ್ದಾರೆ. ಇದೇ ವೇಳೆ ಎಂಇಎಸ್ ಕಾರ್ಯಕರ್ತರು ಮೆರವಣಿಗೆ ಮೇಲೆ ಚಪ್ಪಲಿ ಎಸೆದ ಪರಿಣಾಮ ಪೊಲೀಸರು ಲಾಠಿ ಬೀಸಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details