ಕರ್ನಾಟಕ

karnataka

ಪೀರನವಾಡಿಯಲ್ಲಿ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದೆ: ಡಿಸಿಪಿ ಶೀಮಾ ಲಾಟ್ಕರ್​​

By

Published : Aug 28, 2020, 1:32 PM IST

ಪೀರನವಾಡಿಯಲ್ಲಿ ಪ್ರತಿಮೆ ನಿರ್ಮಾಣ ಸಂಬಂಧ ಉಂಟಾಗಿರುವ ಎರಡು ಗುಂಪುಗಳ ನಡುವಿನ ಗಲಾಟೆ ಇದೀಗ ನಿಯಂತ್ರಣಕ್ಕೆ ಬಂದಿದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ. ಗುಂಪು ಜದುರಿಸಲು ಲಾಠಿಚಾರ್ಜ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು ಎಂದಿದ್ದಾರೆ.

peranavadi-situation-is-in-full-in-control-dcp
ಪೀರನವಾಡಿಯಲ್ಲಿ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದೆ: ಡಿಸಿಪಿ ಶೀಮಾ ಲಾಟ್ಕರ್​​

ಬೆಳಗಾವಿ:ಪ್ರತಿಮೆ ನಿರ್ಮಾಣ ಸಂಬಂಧ ಉಂಟಾಗಿರುವ ಗದ್ದಲ ಕುರಿತು ಜಿಲ್ಲಾಧಿಕಾರಿ ಹಾಗೂ‌ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಮಹಾನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೀರನವಾಡಿಯಲ್ಲಿ ವೃತ್ತದಲ್ಲಿ ‌ಹೆಸರು ಬದಲಾವಣೆ ಆಗುತ್ತದೆ ಎಂಬ ಕಾರಣಕ್ಕೆ ಅನಾವಶ್ಯಕವಾಗಿ ಕೆಲವರು ಮೂರ್ತಿ ಪ್ರತಿಷ್ಠಾಪಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಒಂದು ಗುಂಪಿನವರನ್ನು ಮನವೊಲಿಸುವಾಗಲೇ ಇನ್ನೊಂದು ಗುಂಪು ಸ್ಥಳಕ್ಕೆ ಬಂದ ಹಿನ್ನೆಲೆ ತುಸು ಗಲಾಟೆ ನಡೆದಿದೆ ಎಂದರು.

ಡಿಸಿಪಿ ಶೀಮಾ ಲಾಟ್ಕರ್​​ ಪ್ರತಿಕ್ರಿಯೆ

ಇದಕ್ಕಾಗಿ ಸ್ಥಳದಲ್ಲಿ ಲಾಠಿ ಚಾರ್ಜ್​​ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಅನಧಿಕೃತವಾಗಿ ಮೂರ್ತಿ ಪ್ರತಿಷ್ಠಾಪಿಸಿದ್ದವರ ವಿರುದ್ಧ ಕಾನೂನು ಪ್ರಕಾರ ಪ್ರಕರಣ ದಾಖಲು ಮಾಡಲಾಗಿದೆ. ಇದಲ್ಲದೇ ಸಂಬಂಧಿಸಿದ ಅಧಿಕಾರಿಗಳು ಹಾಗೂ ಡಿಸಿ ಅವರೊಂದಿಗೆ ಮಾತನಾಡಿ ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುವುದು. ಸ್ಥಳದಲ್ಲೇ ಹಿರಿಯ ಅಧಿಕಾರಿಗಳು ಸೇರಿದಂತೆ ಪೊಲೀಸ್ ಭದ್ರತೆ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಡಿಸಿಪಿ ಶೀಮಾ ಲಾಟ್ಕರ್, ಮರಾಠಿ‌ ಸಮುದಾಯದ ಮುಖಂಡರೊಂದಿಗೆ ಈಗಾಗಲೇ ಮಾತನಾಡಲಾಗಿದ್ದು, ಅವರು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲು ಒಪ್ಪಿಕೊಂಡಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದಿದ್ದಾರೆ.

ABOUT THE AUTHOR

...view details