ಬೆಳಗಾವಿ: ಮಹಾರಾಷ್ಟ್ರದ ಮಾದರಿಯಂತೆ ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಶ್ರೀರಾಮ ಸೇನೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿದರು.
ಬೆಳಗಾವಿ: ಸಾರ್ವಜನಿಕ ಗಣೇಶೋತ್ಸವ ಆದೇಶ ಮರು ಪರಿಶೀಲನೆಗೆ ಶ್ರೀರಾಮ ಸೇನೆ ಆಗ್ರಹ - ganesh fest latest news
ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ವಿಧಿಸಿರುವ ನಿರ್ಬಂಧವನ್ನು ಮರುಪರಿಶೀಲಿಸಬೇಕು. ಮಹಾರಾಷ್ಟ್ರ ಮಾದರಿಯಲ್ಲಿ ಅನುಮತಿ ನೀಡಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಕೋವಿಡ್-19 ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದ ಗಣೇಶ ಮೂರ್ತಿ ತಯಾರಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇವಲ ದೇವಸ್ಥಾನ ಮತ್ತು ಮನೆಗಳಿಗೆ ಸೀಮಿತಗೊಳಿಸಿದರೆ ಧಾರ್ಮಿಕ ನಂಬಿಕೆಗೆ ಅನ್ಯಾಯವಾಗುತ್ತದೆ. ಕೂಡಲೇ ರಾಜ್ಯ ಸರ್ಕಾರ ಆದೇಶವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದರು.
125 ವರ್ಷಗಳಿಂದ ಗಣೇಶೋತ್ಸವ ಆಚರಿಸಿಕೊಂಡು ಬರಲಾಗಿದೆ. ಇದು ಜನರ ನಂಬಿಕೆ ಪ್ರಶ್ನೆಯಾಗಿದೆ. ಇನ್ನೊದೆಡೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿ ಮೂರ್ತಿ ತಯಾರಿಸುವವರಿಗೆ ಕೊಡಲಿ ಪೆಟ್ಟು ಬೀಳುತ್ತದೆ. ಬಾರ್, ಮಾಲ್, ಸಾರ್ವಜನಿಕ ಸಂಚಾರ, ದೇವಸ್ಥಾನ, ಮಸೀದಿ ಹಾಗೂ ಚರ್ಚ್ಗಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಹಾಗಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು ಎಂದು ಶ್ರೀರಾಮ ಸೇನೆಯ ಜಿಲ್ಲಾ ಮುಖಂಡ ಶಿವರಾಜ ನಾಯ್ಕ ಒತ್ತಾಯಿಸಿದರು.