ಬೆಳಗಾವಿ:ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಪ್ರವಾಹಕ್ಕೆ ತುತ್ತಾದಾಗ ಪ್ರಧಾನಿ ನರೇಂದ್ರ ಮೋದಿ ಬೇರೆಬೇರೆ ಕಾರ್ಯಕ್ರಮಗಲ್ಲಿ ಬ್ಯುಸಿ ಆಗಿದ್ದರು ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಲಘುವಾಗಿ ಉತ್ತರಿಸುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ
'ಉ-ಕ ನೆರೆ ಬಂದಾಗ ಮೋದಿ ಟ್ವೀಟ್ ಮಾಡದಷ್ಟು ಬ್ಯುಸಿಯಾಗಿದ್ರು'.. ಕೇಂದ್ರ ಸಚಿವ ಸುರೇಶ್ ಅಂಗಡಿ ಸಮರ್ಥನೆ - belagavi
ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡುವ ಧಾವಂತದದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಉತ್ತರ ಕರ್ನಾಟಕದಲ್ಲಿ ಪ್ರವಾಹ ಆದಾಗ ಮೋದಿ ಏಕೆ ಟ್ವೀಟ್ ಮೂಲಕ ಸಂತ್ರಸ್ತರಿಗೆ ಸಮಾಧಾನ ಹೇಳಲಿಲ್ಲ ಎಂದು ಸುದ್ದಿಗಾರರು ಬೆಳಗಾವಿಯಲ್ಲಿ ಕೇಳಿದ ಪ್ರಶ್ನೆಗೆ ಮೋದಿ ಆಗ ಬ್ಯುಸಿಯಾಗಿದ್ದರು ಎಂದು ಹೇಳಿದ್ದಾರೆ.

ಬಿಹಾರ, ಉತ್ತರಪ್ರದೇಶ ರಾಜ್ಯಗಳು ಸದ್ಯ ಪ್ರವಾಹಕ್ಕೆ ತುತ್ತಾಗಿದ್ದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ನೆರೆಪೀಡಿತರಿಗೆ ಸಾಂತ್ವನ ಹೇಳಿದ್ದಾರೆ. ಇಲ್ಲಿ ಪ್ರವಾಹ ಬಂದಾಗ ಮೋದಿ ಏಕೆ ಟ್ವೀಟ್ ಮಾಡಲಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ, ಮೋದಿ ಅವರನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಪ್ರಧಾನಿ ಆಗ ಬ್ಯುಸಿ ಆಗಿದ್ದರೆಂದು ಹೇಳಿದ್ದಾರೆ.
ಪ್ರವಾಹದ ಸಂದರ್ಭದಲ್ಲಿ ಗೃಹಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಕೇಂದ್ರ ಅಧ್ಯಯನ ತಂಡ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕೇಂದ್ರಕ್ಕೆ ವರದಿ ನೀಡಿದೆ ಎಂದರು.ಕೇಂದ್ರದ ಎನ್‌ಡಿಆರ್‌ಎಫ್ ಅನುದಾನ ಆಯಾ ಜಿಲ್ಲೆಗಳ ಡಿಸಿ ಅಕೌಂಟ್ನಲ್ಲಿದೆ. ಪ್ರವಾಹದ ಪುನರ್ವಸತಿ ಕೆಲಸ ಸಮರೋಪಾದಿಯಲ್ಲಿ ಸಾಗಿದೆ. ಕೇಂದ್ರ-ರಾಜ್ಯ ಸರ್ಕಾರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಅಗತ್ಯ ಪರಿಹಾರ ಕೂಡ ಬಿಡುಗಡೆ ಆಗಲಿದೆ ಎಂದರು.