ಬೆಳಗಾವಿ: ಮುಂಬೈ ಕರ್ನಾಟಕ ಭಾಗದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಬಿಜೆಪಿ ಪ್ರಯತ್ನ ನಡೆಸಿದ್ದು, ಬರುವ ಏ. 18ರಂದು ಚಿಕ್ಕೋಡಿ ಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಾಹಾಂತೇಶ್ ಕವಟಗಿಮಠ ಹೇಳಿದರು.
ಮೋದಿ ಆಗಮನದಿಂದ ಮುಂಬೈ ಕರ್ನಾಟಕದಲ್ಲಿಯೂ ಕಮಲ ಅರಳಲಿದೆ: ಕವಟಗಿಮಠ - Mahantesh Kavatagimath
ಏ. 18 ರಂದು ಚಿಕ್ಕೋಡಿ ಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ಹಿನ್ನೆಲೆ ಚಿಕ್ಕೋಡಿ ಕ್ಷೇತ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಮಾಹಾಂತೇಶ್ ಕವಟಗಿಮಠ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಪರಿಷತ್ ಸದಸ್ಯ ಮಾಹಾಂತೇಶ್ ಕವಟಗಿಮಠ
ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ 22 ಕ್ಷೇತ್ರಕ್ಕಿಂತ ಜಾಸ್ತಿ ಸ್ಥಾನಗಳನ್ನು ಗೆಲ್ಲುತ್ತದೆ. ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿ ಅತ್ಯಂತ ಬಲಿಷ್ಠವಾಗಿದ್ದು, ಈ ಬಾರಿ ಚಿಕ್ಕೋಡಿ ಕ್ಷೇತ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು. ಬೆಳಗಾವಿ ಹಾಗೂ ಚಿಕ್ಕೋಡಿ ಎರಡು ಕ್ಷೇತ್ರಗಳನ್ನು ಒಳಗೊಂಡಂತೆ ಪ್ರಧಾನಿ ಮೋದಿಯವರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಸಾವಿರಾರು ಕಾರ್ಯಕರ್ತರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಮಾಹಾಂತೇಶ್ ಕವಟಗಿಮಠ ಹೇಳಿದರು.