ಬೆಳಗಾವಿ: ಜಿಲ್ಲೆಯಲ್ಲಿ ಒಂದು ವಾರದ ಹಿಂದೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದ ಸಂಬಂಧ ಮತ್ತೋರ್ವ ಆರೋಪಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಕಲ್ಲು ತೂರಾಟ ಪ್ರಕರಣ: ಮತ್ತೋರ್ವ ಆರೋಪಿ ಆರೆಸ್ಟ್ - Belgaum protest Case news
ಬೆಳಗಾವಿ ಜಿಲ್ಲೆಯಲ್ಲಿ ಒಂದು ವಾರದ ಹಿಂದೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದ ಸಂಬಂಧ ಮತ್ತೋರ್ವ ಆರೋಪಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

Police Arrest
ವೀರಭದ್ರ ನಗರದ ಅಭಿದ್ಖಾನ್ ಕಡೋಲಿ ಬಂಧಿತ ಆರೋಪಿ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಒಂದು ವಾರದ ಹಿಂದೆ ವಿವಿಧ ಮುಸ್ಲಿಂ ಸಂಘಟನೆಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನೆ ಮುಗಿಸಿ ಮರಳುವಾಗ ಕೆಲವರು ಬಸ್, ಟ್ಯಾಂಕರ್ ಮೇಲೆ ಕಲ್ಲು ತೂರಾಡಿದ್ದರು.
ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈಗಾಗಲೇ ನಾಲ್ಕು ಜನ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ.