ಚಿಕ್ಕೋಡಿ :ಹೊಲದಲ್ಲಿ ಅಕ್ರಮವಾಗಿ ಗಾಂಜಾವನ್ನು ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕೋಡಿ : ಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಅಂದರ್ - Chikkodi crime latest news
ಚಿಕ್ಕೋಡಿ ತಾಲೂಕಿನ ಬೆಳಗಲಿ ಗ್ರಾಮದ ವ್ಯಕ್ತಿಯೋರ್ವ ಅಕ್ರಮವಾಗಿ ತನ್ನ ಹೊಲದಲ್ಲಿ ಗಾಂಜಾ ಗಿಡ ಬೆಳೆಸಿದ್ದ. ಈತನನ್ನು ಪೊಲೀಸರು ಬಂಧಿಸಿದ್ದಾರೆ.
Accused
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಶಿವ್ವಪ್ಪಾ ಶಿರಗಾಂವಿ ಎಂಬಾತ ತನ್ನ ಹೊಲದಲ್ಲಿ ಗಾಂಜಾ ಗಿಡ ಬೆಳೆಸಿದ್ದನು. ಈ ಕುರಿತು ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈತನಿಂದ ಸುಮಾರು 30 ಸಾವಿರ ರೂಪಾಯಿ ಮೌಲ್ಯದ 17 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.