ಬೆಳಗಾವಿ: ನಗರದ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿರುವ ಮಹಿಳಾ ಶೌಚಾಲಯಕ್ಕೆ ವ್ಯಕ್ತಿಯೊಬ್ಬ ನುಗ್ಗಿ ಬಾಗಿಲು ಮುಚ್ಚಿಕೊಂಡು ಹುಚ್ಚಾಟ ನಡೆಸಿರುವ ಘಟನೆ ವರದಿಯಾಗಿದೆ. ಇಲ್ಲಿನ ಚೆನ್ನಮ್ಮ ವೃತ್ತದಲ್ಲಿರುವ ಸಾಹಿತ್ಯ ಭವನದ ಆವರಣದಲ್ಲಿರುವ ಮಹಿಳಾ ಶೌಚಾಲಯಕ್ಕೆ ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಒಳಗೆ ಪ್ರವೇಶಿಸಿದ ವ್ಯಕ್ತಿಯ ಹುಚ್ಚಾಟವನ್ನು ಕಂಡ ಅಲ್ಲಿನ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದರು.
ಮಹಿಳಾ ಶೌಚಾಲಯಕ್ಕೆ ನುಗ್ಗಿ ಹುಚ್ಚಾಟ.. ಬೆಳಗಾವಿಯಲ್ಲಿ ಆರೋಪಿ ಅರೆಸ್ಟ್ - police arrested the man who entered into the women toilet at belagavi
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿರುವ ಸಾಹಿತ್ಯ ಭವನದ ಆವರಣದಲ್ಲಿರುವ ಮಹಿಳಾ ಶೌಚಾಲಯಕ್ಕೆ ಪ್ರವೇಶಿಸಿದ ವ್ಯಕ್ತಿಯ ಹುಚ್ಚಾಟವನ್ನು ಕಂಡ ಅಲ್ಲಿನ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ.
![ಮಹಿಳಾ ಶೌಚಾಲಯಕ್ಕೆ ನುಗ್ಗಿ ಹುಚ್ಚಾಟ.. ಬೆಳಗಾವಿಯಲ್ಲಿ ಆರೋಪಿ ಅರೆಸ್ಟ್ police-arrested-the-man-who-entered-into-the-women-toilet-at-belgaum](https://etvbharatimages.akamaized.net/etvbharat/prod-images/768-512-15416356-thumbnail-3x2-yyy.jpg)
ಮಹಿಳಾ ಶೌಚಾಲಯಕ್ಕೆ ನುಗ್ಗಿ ಹುಚ್ಚಾಟ ನಡೆಸಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು
ವ್ಯಕ್ತಿಯನ್ನು ಕಿತ್ತೂರು ತಾಲೂಕಿನ ಖೋದಾನಪುರ ಮೂಲದವನು ಎನ್ನಲಾಗ್ತಿದೆ. ಬಳಿಕ ಸ್ಥಳಕ್ಕಾಗಮಿಸಿದ ಮಾರ್ಕೆಟ್ ಪಿಎಸ್ಐ ವಿಠ್ಠಲ ಹಾವನ್ನವರ್ ಅವರು ಆರೋಪಿಯನ್ನು ಶೌಚಾಲಯದಿಂದ ಹೊರಕರೆತರುವಲ್ಲಿ ಯಶಸ್ವಿಯಾದರು. ಬಳಿಕ ಆತನನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಓದಿ :ವಿಶ್ವ ರಕ್ತದ ಕ್ಯಾನ್ಸರ್ ದಿನ : ರೋಗದ ಬಗ್ಗೆ ನಿಮಗಿರುವ ತಪ್ಪು ಕಲ್ಪನೆಗಳಿಗೆ ಇಲ್ಲಿದೆ ಉತ್ತರ