ಬೆಳಗಾವಿ: ಇಂದು ವಿಶ್ವದಾದ್ಯಂತ ಆತ್ಮಹತ್ಯೆ ತಡೆ ದಿನಾಚರಣೆ ಆಚರಿಸಲಾಗುತ್ತಿದೆ. ಅಲ್ಲದೆ, ಆತ್ಮಹತ್ಯೆ ಮಾಡಿಕೊಳ್ಳದಂತೆ ಜಾಗೃತಿ ಮೂಡಿಸಲಾಗುತ್ತದೆ. ಆದ್ರೆ ನಗರದ ಗಣೇಶ ಉತ್ಸವ ಬಂದೋಬಸ್ತ್ಗೆ ಬಂದಿದ್ದ ಪೇದೆವೋರ್ವ ಇದೇ ದಿನವೇ ಆತ್ಮಹತ್ಯೆ ನಗರದ ಕೆಐಡಿಬಿ ಹಾಲ್ನ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ.
ಆತ್ಮಹತ್ಯೆ ತಡೆ ದಿನಾಚರಣೆಯಂದೇ ಕರ್ತವ್ಯ ನಿರತ ಪೊಲೀಸ್ ಪೇದೆ ನೇಣಿಗೆ ಶರಣು..! - belgavi crime news
ಬೆಳಗಾವಿ ನಗರದ ಗಣೇಶ ಉತ್ಸವ ಬಂದೋಬಸ್ತ್ಗೆ ನಿಯೋಜನೆಗೊಂಡಿದ್ದ ಪೊಲೀಸ್ ಪೇದೆವೋರ್ವ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ಇಂದು ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯಂದೇ ಪೇದೆ ನೇಣಿಗೆ ಶರಣಾಗಿದ್ದಾರೆ.
ನೇಣಿಗೆ ಶರಣಾದ ಪೇದೆ ಪ್ರಮೋದ
ಮೈಸೂರಿನ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೋದ (28) ಎಂಬುವರು ಬೆಳಗಾವಿಯಲ್ಲಿ ನಡೆಯುವ ಗಣೇಶೋತ್ಸವ ಮೆರವಣಿಗೆಯ ಬಂದೋಬಸ್ತ್ಗೆ ನಿಯೋಜನೆಗೊಂಡಿದ್ದರು. ನಗರದ ಕೆಐಡಿಬಿ ಹಾಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನೋದು ತಿಳಿದು ಬಂದಿಲ್ಲ.
ಸ್ಥಳಕ್ಕೆ ಮಾಳಮಾರುತಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.