ಚಿಕ್ಕೋಡಿ: ಬೈಕ್ಗೆ ಪೊಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೇರೂರ ಗ್ರಾಮದ ಬಳಿ ನಡೆದಿದೆ.
ಬೈಕ್ಗೆ ಪೊಲೀಸ್ ಜೀಪ್ ಡಿಕ್ಕಿ: ಸವಾರ ಸಾವು - belagavi death latest news
ಬೈಕ್ಗೆ ಪೊಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೇರೂರ ಗ್ರಾಮದ ಬಳಿ ನಡೆದಿದೆ.
ಬೈಕ್ ಸವಾರನಿಗೆ ಪೊಲೀಸ್ ಜೀಪ್ ಡಿಕ್ಕಿ; ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
ಶ್ರೀಕಾಂತ್ ಮುಚಂಡಿ (65) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ವ್ಯಕ್ತಿ. ಅಥಣಿಯಿಂದ ಬೆಳಗಾವಿಗೆ ಹೊರಟಿದ್ದ ಅಥಣಿ ಡಿವೈಎಸ್ಪಿ ಎಸ್.ವಿ.ಗಿರೀಶ ಅವರ ಸರ್ಕಾರಿ ಜೀಪ್ ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಚಾಲಕ ಎಸ್.ಬಿ.ದೊಡ್ಡಮನಿ ಅವರ ಸಹಾಯದಿಂದ ಗಾಯಾಳುವನ್ನ ಚಿಕ್ಕೋಡಿ ಆಸ್ಪತ್ರೆಗೆ ರವಾನೆ ಮಾಡಿದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸದ್ಯ ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 29, 2020, 8:28 PM IST