ಬೆಳಗಾವಿ:ಲಾಕ್ ಡೌನ್ ಆದೇಶ ಉಲ್ಲಂಘಿಸಿ ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದವರನ್ನು ಹೊರ ಕರೆತಂದ ಪೊಲೀಸರು ಅವರ ಮೇಲೆ ಲಾಠಿ ಚಾರ್ಜ್ ಮಾಡಿದ ಘಟನೆ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ.
ಸರ್ಕಾರದ ಆದೇಶ ಧಿಕ್ಕರಿಸಿ ಮಸೀದಿಯಲ್ಲಿ ಸಾಮೂಹಿಕ ನಮಾಜ್: ಪೊಲೀಸರಿಂದ ಲಾಠಿ ಚಾರ್ಜ್ - ಪೊಲೀಸರಿಂದ ಲಾಠಿಚಾರ್ಜ್
ಗೋಕಾಕ್ ನಗರದಲ್ಲಿ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಲಾಕ್ ಡೌನ್ ಆದೇಶ ಇದ್ದರೂ ನಗರದ ಎರಡು ಮಸೀದಿಗಳಿಗೆ ನೂರಾರು ಜನರು ನಮಾಜ್ ಮಾಡಲು ಆಗಮಿಸಿದ್ದರು. ಸಾಮೂಹಿಕ ಪ್ರಾರ್ಥನೆ, ಜಾತ್ರೆ, ಹಬ್ಬ, ಸಮಾರಂಭ ನಡೆಸದಂತೆ ಸರ್ಕಾರ ಹೊರಡಿಸಿದ ಆದೇಶ ಉಲ್ಲಂಘಿಸಿ ನಮಾಜ್ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಗೋಕಾಕ್ ಶಹರ್ ಠಾಣೆಯ ಪೊಲೀಸರು ಎಲ್ಲರನ್ನೂ ಹೊರಕರೆದು ಲಾಠಿ ರುಚಿ ತೋರಿಸಿದರು. ಬಳಿಕ ಮಸೀದಿಯ ಕೆಲ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ದೇಶಾದ್ಯಂತ ಲಾಕ್ ಡೌನ್ ಆದೇಶ ಹೊರಡಿಸಿರುವುದು ಜನರ ಹಿತದೃಷ್ಟಿಯಿಂದ. ಹಾಗಾಗಿ ದೇಶದ ನಾಗರಿಕರೆಲ್ಲ ಸರ್ಕಾರದ ಆದೇಶ ಪಾಲಿಸುವ ಮೂಲಕ ಮಹಾಮಾರಿ ಕೊರೊನಾವನ್ನು ನಿಯಂತ್ರಿಸಲು ಕೈಜೋಡಿಸಬೇಕಿದೆ.