ಬೆಳಗಾವಿ: ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 38ರಲ್ಲಿ ಪಕ್ಷೇತರ ಅಭ್ಯರ್ಥಿ ಅಜೀಂ ಪಟವೇಕರ್ ಗೆಲುವು ಸಾಧಿಸಿದ ಬಳಿಕ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ.
ಅಜೀಂ ಪಟವೇಕರ್ ಜಯ ಸಾಧಿಸುತ್ತಿದ್ದಂತೆ ಬೆಂಬಲಿಗರು, ಬೆಳಗಾವಿ ನಗರದ ಬಿ ಕೆ ಮಾಡೆಲ್ ಶಾಲೆಯಲ್ಲಿನ ಮತ ಎಣಿಕೆ ಕೇಂದ್ರದಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ದಾಟಿ ಸಂಭ್ರಮಿಸಿದ್ದಾರೆ. ಬೆಂಬಲಿಗರು ಅಪಾರ ಸಂಖ್ಯೆಯಲ್ಲಿದ್ದ ಕಾರಣ ಅವರನ್ನು ಪೊಲೀಸರು ಲಾಠಿ ಬೀಸುವ ಮೂಲಕ ಚದುರಿಸಿದರು.