ಬೆಳಗಾವಿ: ಜಿಲ್ಲೆಯಲ್ಲಿ ಹೂ ಖರೀದಿಸಲು ಜಮಾಯಿಸಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿದ ಘಟನೆ ನಗರದ ಹೂ ಮಾರುಕಟ್ಟೆಯಲ್ಲಿ ನಡೆದಿದೆ.
ಯುಗಾದಿಗೆ ಹೂ ಖರೀದಿಸಲು ಬಂದಿದ್ದವರಿಗೆ ಲಾಠಿ ಏಟು.. ದಿಕ್ಕಾಪಾಲಾಗಿ ಓಡಿದ ಜನ - ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ ಪೊಲೀಸರು
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಲಾಕ್ ಡೌನ್ ಮಾಡಲಾಗಿದೆ. ಆದರೆ ಇದನ್ನು ಕೇರ್ ಮಾಡದೆ ಹೂವಿನ ಮಾರುಕಟ್ಟೆಯಲ್ಲಿ ಖರೀದಿಗೆ ಸೇರಿದ್ದ ಜನರನ್ನ ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿದ್ದಾರೆ.
ಲಾಕ್ ಡೌನ್ ತಿರಸ್ಕರಿಸಿ ಹೂ ಮಾರುಕಟ್ಟೆಯಲ್ಲಿ ಜಮಾಯಿಸಿದ ಜನ
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕರ್ಪ್ಯೂ ಮಾದರಿಯಲ್ಲಿ ಲಾಕ್ ಡೌನ್ ಮಾಡಲಾಗಿದೆ. ಆದ್ರೆ ಇದ್ಯಾವುದನ್ನೂ ಲೆಕ್ಕಿಸದೆ ಜನರು ಹೂ ಮಾರಾಟ ಹಾಗೂ ಖರೀದಿಯಲ್ಲಿ ತೊಡಗಿದ್ದರು.
ಪೊಲೀಸರು ಮೈಕ್ ಮೂಲಕ ಘೋಷಣೆ ಮಾಡಿದ್ರೂ ಜನರು ಕ್ಯಾರೆ ಎನ್ನದಿದ್ದಾಗ ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದರು. ಪೊಲೀಸರು ಲಾಠಿ ಚಾರ್ಜ್ ಆರಂಭಿಸುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದರು.