ಅಥಣಿ:ಕಲಬೆರಕೆ ಹಾಲು ತಯಾರಿಕಾ ಘಟಕದ ಮೇಲೆ ಡಿಸಿಪಿಬಿ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಝುಂಜರವಾಡ ಗ್ರಾಮದ ಹೊರವಲಯದ ಮನೆಯೊಂದರಲ್ಲಿ ನಡೆದಿದೆ.
ಕಲಬೆರಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸ್ ದಾಳಿ : ಆರೋಪಿ ಅಂದರ್
ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಹೊರವಲಯದಲ್ಲಿರುವ ಕಲಬೆರಕೆ ಹಾಲು ತಯಾರಿಕಾ ಘಟಕದ ಮೇಲೆ ಡಿಸಿಪಿಬಿ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಅಂದರ್
ಉಮರ್ ಅಲಿ ಹಾಜೀಸಾಬ (23) ಬಂಧಿತ ಆರೋಪಿ. ಬೆಳಗಾವಿ ಜಿಲ್ಲೆ ಪೊಲೀಸ್ ಸಿಬ್ಬಂದಿಯು ಎಸ್ಪಿಯವರ ಮಾರ್ಗದರ್ಶನದಂತೆ ಡಿಸಿಪಿಬಿ ಘಟಕದ ಪೊಲೀಸ್ ಇನ್ಸ್ಪೆಕ್ಟರ್ ನಿಂಗನಗೌಡ ಪಾಟೀಲ್ ನೇತೃತ್ವದ ತಂಡ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದೆ. ಸುಮಾರು 49,270 ಲೀಟರ್ಗೂ ಅಧಿಕ ಕಲಬೆರಕೆ ಹಾಲು ಹಾಗೂ ಕಲಬೆರಕೆ ಮಾಡುವ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
Last Updated : Feb 25, 2020, 8:49 AM IST